Headlines

ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಖಾಸಗಿ ಬಸ್ – ಹಲವರಿಗೆ ಗಾಯ

ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಖಾಸಗಿ ಬಸ್ – ಹಲವರಿಗೆ ಗಾಯ

Several people sustained minor injuries after a private bus and a car collided near Kaimara in Thirthahalli. The bus overturned while the car was completely damaged in the accident reported under Agumbe police station limits.

ತೀರ್ಥಹಳ್ಳಿ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡ ಘಟನೆ ತಾಲೂಕಿನ ಕೈಮರ ಸಮೀಪ ನಡೆದಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಚಾಲಕನ ನಿದ್ದೆ ಮಂಪರಿನಿಂದಲೇ ಈ ದುರ್ಘಟನೆ ಸಂಭವಿಸಿರಬಹುದು ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.

ಬಸ್ ಹಾಗೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೀಡಾದ ಬಸ್ ಬಳ್ಳಾರಿ ಮೂಲದ್ದಾಗಿದ್ದು, ಕಾರು ಶಿವಮೊಗ್ಗ ಮೂಲದ್ದು ಎಂದು ತಿಳಿದು ಬಂದಿದೆ.

ಈ ಘಟನೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

About The Author