Headlines

ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ : ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್‌ ಸಾವು

ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ: ಮೆಸ್ಕಾಂ ಲೈನ್‌ಮನ್‌ ವಿದ್ಯುತ್ ಸ್ಪರ್ಶಿಸಿ ಸಾವು

MESCOM lineman Shivakumar Chakrasali died due to electric shock while repairing a damaged power line in Shiralakoppa of Shivamogga district. Police have registered a case.

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಕೆಟ್ಟು ಹೋಗಿದ್ದ ವಿದ್ಯುತ್ ತಂತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್‌ ಮೃತಪಟ್ಟ ಘಟನೆ ನಡೆದಿದೆ.

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಎಂ. ಕಲ್ಲಳ್ಳಿ ಗ್ರಾಮದ ಶಿವಕುಮಾರ ಚಕ್ರಸಾಲಿ (34) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಪಟ್ಟಣದ ಸುಪ್ರಭಾತ ಹೋಟೆಲ್ ಹಿಂಭಾಗ ಮಳೆಯಿಂದ ಹಾನಿಗೊಳಗಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಅವಘಡ ಸಂಭವಿಸಿದೆ. ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಶಿವಕುಮಾರ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

About The Author