ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ
ಶಿವಮೊಗ್ಗ : ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಬೆಳ್ಳಂಬೆಳಗ್ಗೆ ಕಾವೇರಿ ಹೋರಾಟ ನಡೆಸಿದ ಕನ್ನಡ ಪರ ಸಂಘಟನೆಗಳು, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಜೊತೆಗೆ ಕರವೇ ಹಾಗೂ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಾವೇರಿ ನಮ್ಮದು, ಕಾವೇರಿ ನಮ್ಮದು ಎಂದು ಘೋಷಣೆ ಕೂಗಿ ಕೆಲ ಕಾಲ ರಸ್ತೆ ತಡೆ ನಡೆಸಿದರು. ಈ ವೇಳೆ ಪೊಲೀಸರು ವೇದಿಕೆ ಕಾರ್ಯಕರ್ತರನ್ನು ಬಂಧಿಸಿ ಕರೆದುಕೊಂಡು ಹೋದರು.
ಎಂದಿನಂತೆ ವಾಹನ ಸಂಚಾರ:
ಕರ್ನಾಟಕ ಬಂದ್‌ಗೆ ಶಿವಮೊಗ್ಗ ಜಿಲ್ಲೆಯಲ್ಲಿ ಅಂತಹ ಪ್ರತಿಕ್ರಿಯೆ ವ್ಯಕ್ತವಾದಂತೆ ಕಂಡುಬಂದಿಲ್ಲ. ಕೆ.ಎಸ್.ಆರ್.ಟಿ.ಸಿ. ಹಾಗೂ ಖಾಸಗಿ ವಾಹನಗಳ ಸಂಚಾರ ಎಂದಿನಂತೆ ಇದೆ. ಜಿಲ್ಲೆಯಲ್ಲಿ ಬಂದ್‌ಗೆ ಇದುವರೆಗೂ ಯಾವುದೇ ಸಂಘಟನೆ ಕರೆ ನೀಡಿಲ್ಲ.
ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸುತ್ತಿವೆ.
ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವದ ಹಿನ್ನಲೆ ಗುರುವಾರ ಶಿವಮೊಗ್ಗದಲ್ಲಿ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಿದ್ದರು. ಹೀಗಾಗಿ ಇವತ್ತಿನ ಕರ್ನಾಟಕ ಬಂದ್‌ಗೆ ಶಿವಮೊಗ್ಗದಲ್ಲಿ ಬೆಂಬಲ ನೀಡಿಲ್ಲ .
ಶಿವಮೊಗ್ಗದಲ್ಲಿ ಬೆಳಿಗ್ಗೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ಆರಂಭಿಸಿದ್ದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರುಸೇವೆಯನ್ನು ತಮಿಳುನಾಡಿಗೆ ನೀರು ಹರಿಸದಂತೆ ಆಕ್ರೋಶ ವ್ಯಕ್ತಪಡಿಸಿದರು.