ಶಿವಮೊಗ್ಗ : ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ಆರ್‌ಎಂ ಮಂಜುನಾಥ್ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದರೆ ಆರ್ ಎಂ ಮಂಜುನಾಥ್ ಹೊರತುಪಡಿಸಿ ಬೇರೆ ಯಾರು ಕೂಡ ನಾಮಪತ್ರ ಸಲ್ಲಿಕೆ ಮಾಡಿದ ಕಾರಣ ಮಂಜುನಾಥ್ ಗೌಡ ರವರೇ ಆವಿರೋಧವಾಗಿ ಆಯ್ಕೆಯಾದರು.
ಇನ್ನೂ ಈ ಹಿಂದೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಚೆನ್ನವೀರಪ್ಪ ಅವರನ್ನು ಅವಿಶ್ವಾಸ ನಿರ್ಣಯದ ಮೂಲಕ ಇತ್ತೀಚಿಗಷ್ಟೇ ಕೆಳಗಿಳಿಸಲಾಗಿತ್ತು.
2021 ರಲ್ಲಿ ನಕಲಿ ಬಂಗಾರ ಪ್ರಕರಣದಲ್ಲಿ ಮಂಜುನಾಥ್ ಗೌಡರನ್ನ ಅಧ್ಯಕ್ಷ ಗಾದಿಯಿಂದ ಕೆಳಗಿಳಿಸಲಾಗಿತ್ತು, ಆದರೆ ಇದೀಗ ಮತ್ತೆ ಮಂಜುನಾಥ್ ಗೌಡರು ಆರೋಪಗಳಿಂದ ಮುಕ್ತರಾಗಿ ಡಿಸಿಸಿ ಬ್ಯಾಂಕ್ ಅಧಿಕಾರ ಹಿಡಿಯುತ್ತಿರುವುದು ಸಹಕಾರಿ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.