ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: ಯುವಕನ ಬಂಧನ
A 21-year-old youth was arrested by Thirthahalli police for creating public nuisance under the influence of ganja near the fish market road. Medical tests confirmed cannabis consumption.
ತೀರ್ಥಹಳ್ಳಿ: ಪಟ್ಟಣದ ಮೀನು ಮಾರುಕಟ್ಟೆ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜೂನ್ 2ರಂದು ಮಧ್ಯಾಹ್ನ ವಿಶೇಷ ಗಸ್ತು ಕರ್ತವ್ಯದಲ್ಲಿದ್ದ ತೀರ್ಥಹಳ್ಳಿ ಪೊಲೀಸರು, ಮೀನು ಮಾರುಕಟ್ಟೆ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಜೋರಾಗಿ ಕೂಗಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿರುವುದನ್ನು ಗಮನಿಸಿದರು. ಸಮವಸ್ತ್ರದಲ್ಲಿದ್ದ ಪೊಲೀಸರನ್ನು ಕಂಡ ಕೂಡಲೇ ಆತ ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿದು ವಿಚಾರಣೆ ನಡೆಸಿದರು. ಮೇಲಿನ ಕುರುವಳ್ಳಿಯ ನಿವಾಸಿಯಾಗಿರುವ 21 ವರ್ಷದ ಯುವಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದೇ ತಡಬಡಾಯಿಸಿದ್ದಾನೆ.
ಆತನ ವರ್ತನೆಯಲ್ಲಿ ನಶೆಯ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ, ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ವೈದ್ಯರು ನಡೆಸಿದ ಪರೀಕ್ಷೆಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.
ವೈದ್ಯಕೀಯ ವರದಿ ಆಧರಿಸಿ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…