ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ
ಹೊಸನಗರ : ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೊಸನಗರ ಪೊಲೀಸ್ ಠಾಣೆ ಪಿಎಸ್ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಖಚಿತ ಮಾಹಿತಿಯನ್ನಾಧರಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ.
ಪಟಗುಪ್ಪ ಬಳಿಯಲ್ಲಿ ಎರಡು ಟಿಪ್ಪರ್ ಲಾರಿ ಹಾಗೂ ಸೊನಲೆ ಗ್ರಾಮದಲ್ಲಿ ಒಂದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಗಂಗಪ್ಪ , ಸುನೀಲ್ ಹಾಗೂ ಅವಿನಾಶ್ ಪಾಲ್ಗೊಂಡಿದ್ದರು.