ಗಣೇಶನ ಸಮ್ಮುಖದಲ್ಲಿ ಭಕ್ತಾಕರ್ಷಣೆಗೊಂಡ ಕೋಲಾಟ ನೃತ್ಯ ಪ್ರದರ್ಶನ
ರಿಪ್ಪನ್ಪೇಟೆ;-ಗ್ರಾಮೀಣ ಪ್ರದೇಶದಲ್ಲಿ ಹಾಸುಹೊಕ್ಕಾಗಿರುವ ಜಾನಪದ ಕಲೆಗಳಲ್ಲಿ ಒಂದಾದ ವಿವಿಧ ಭಂಗಿಯ ಕೋಲಾಟ ಪ್ರದರ್ಶನವು ಭಕ್ತಾಕರ್ಷಣೆಗೊಂಡಿತು.
ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದು ಮಹಾಸಭಾದ 56 ನೇ ವರ್ಷದ ಗಣೇಶೋತ್ಸವ ಸಮಿತಿಯವರು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಬಳೆಕೋಲಾಟ ಪ್ರದರ್ಶನದಲ್ಲಿ ಕೆದಲುಗುಡ್ಡೆ ಮತ್ತು ಚಿಪ್ಪಿಳ್ಳಿ ಕೋಲಾಟ ತಂಡದವರ ಜಡೆ ಕೋಲಾಟ ಪ್ರದರ್ಶನ ಜನಾಕರ್ಷಣೆಗೊಂಡಿತು.
ಹಿಂದೂ ಮಹಾಸಭಾ ಕಟ್ಟಡ ಸಮಿತಿಯ ಅಧ್ಯಕ್ಷ ಎಂ.ಬಿ.ಮಂಜುನಾಥ ಮಾತನಾಡಿ ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸಿ ಪ್ರೋತ್ಸಾಹಿಸುವ ಕಾರ್ಯದಲ್ಲಿ ಇಲ್ಲಿನ ಕಲಾ ತಂಡಗಳ ಕಾರ್ಯ ಪ್ರಶಂಸನೀಯವೆಂದು ಹೇಳಿ ಬರುವ ವರ್ಷದಿಂದ ಈ ಕೋಲಾಟಕ್ಕೆ ಉತ್ತೇಜನ ನೀಡುವ ಉದ್ದೇಶದಿಂದಾಗಿ ಮಹಿಳೆಯರಿಗೂ ಇಂತಹ ಕಲಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಹಿಂದು ಮಹಾಸಭಾ ಸಮಿತಿ ಆಧ್ಯಕ್ಷ ನಾಗರಾಜ್ಪವಾರ್,ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸುದೀಂದ್ರಪೂಜಾರಿ, ಎಂ.ಸುರೇಶ್ಸಿಂಗ್,ಆರ್.ರಾಘವೇಂದ್ರ,ಪ್ರಧಾನಕಾರ್ಯದರ್ಶಿ ಲಕ್ಷö್ಮಣ ಬಳ್ಳಾರಿ,ಹೆಚ್.ಎನ್.ಚೋಳರಾಜ್,ಯೋಗೀಶ್,ಡಿ.ಈ.ರವಿಭೂಷಣ,ಆರ್.ಈ.ಭಾಸ್ಕರ್ಶೆಟ್ಟಿ,ವೈ.ಜೆ.ಕೃಷ್ಣ,ವಾಸುಶೆಟ್ಟಿಗವಟೂರು,ಇನ್ನಿತರರು ಹಾಜರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್