ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ಮೂವರು ಆಟಗಾರರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಖೋಖೋ ಪಂದ್ಯಾವಳಿಯಲ್ಲಿ ಕಾಲೇಜಿನ ವಿದ್ಯಾರ್ಥಿ ನಿರಂಜನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೇಯಸ್ ರಾಜ್ ,ನೂಮನ್ ,ಶ್ರೇಯಸ್ ಎಸ್ ,ಭಾನುಪ್ರಕಾಶ್ , ನಂದನ್ , ಮಹಮ್ಮದ್ ಅಫ಼್ರೀದ್ , ಅರ್ಜುನ್ ,ಅಶ್ವಿನ್ ,ವಿನೀತ್ , ರೋಹನ್ , ಅದ್ವಿತೀಯ ಸಾಧನೆ ತೋರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಾದ ಪ್ರಿಯಾಂಕಾ , ಜೋಸ್ನ , ಸಿಂಚನ , ನಜ್ಮಾ , ನಿಧಿ ಎಸ್ ,ಅಶ್ವಿತಾ ಬಿ ಅದ್ವಿತೀಯ ಪ್ರದರ್ಶನ ತೋರಿ ದ್ವಿತೀಯ ಸ್ಥಾನ ಪಡೆದಿದ್ದು ಪ್ರಿಯಾಂಕ ,ನಜ್ಮಾ ,ಮತ್ತು ಅಶ್ವಿತಾ ಬಿ ಮೂವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಅದ್ವಿತೀಯ ಪ್ರದರ್ಶನ ತೋರುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ ಬೇಳೂರು ಗೋಪಾಲಕೃಷ್ಣ. ಉಪಾಧ್ಯಕ್ಷರಾದ ಜಿ ಆರ್ ಗೋಪಾಲಕೃಷ್ಣ .ಪ್ರಾಚಾರ್ಯ ಎ. ಮಂಜುನಾಥ್ . ಕಾಲೇಜು ಅಭಿವೃದ್ಧಿ ಸಮಿತಿಯವರು. ಉಪನ್ಯಾಸಕರು, ಸಿಬ್ಬಂದಿ ವರ್ಗದವರು, ಅಭಿನಂದನೆ ಸಲ್ಲಿಸಿದ್ದಾರೆ.