Headlines

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಲು ಮನವಿ

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಲು ಮನವಿ

Mother Nagaveni and her two sons, Ashwath and Ashwin, have gone missing from Haraguvalli village in Shikaripura taluk since June 17. Shivamogga police have appealed to the public to share any information regarding their whereabouts.

ಶಿವಮೊಗ್ಗ, ಜೂನ್ 19: ಶಿಕಾರಿಪುರ ತಾಲ್ಲೂಕಿನ ಹರಗುವಳ್ಳಿ ಗ್ರಾಮದ ನಿವಾಸಿ ನವೀನ್ ಕುಮಾರ್ ಅವರ ಅಕ್ಕ ನಾಗವೇಣಿ (31) ಅವರು ತಮ್ಮ ಇಬ್ಬರು ಮಕ್ಕಳಾದ ಅಶ್ವತ್ (14) ಹಾಗೂ ಅಶ್ವಿನ್ (12) ಅವರನ್ನು ಕರೆದುಕೊಂಡು ಜೂನ್ 17ರಂದು ಮನೆಯಿಂದ ತೆರಳಿದ್ದು, ಈವರೆಗೆ ವಾಪಸ್ಸಾಗಿಲ್ಲ ಎಂದು ತಿಳಿದುಬಂದಿದೆ.

ನಾಗವೇಣಿ ಅವರು ವಿಚ್ಛೇದಿತರಾಗಿದ್ದು, ಕಳೆದ ಒಂದು ವರ್ಷದಿಂದ ತಮ್ಮ ಸಹೋದರ ನವೀನ್ ಕುಮಾರ್ ಅವರ ಮನೆಯಲ್ಲಿ ವಾಸಿಸುತ್ತಿದ್ದರು. ಜೂನ್ 17ರಂದು ಮಕ್ಕಳೊಂದಿಗೆ ಮನೆಯಿಂದ ಹೊರಟ ಅವರು ಮರಳಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ನಾಗವೇಣಿ ಅವರ ಚಹರೆ:

5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ತೆರಳುವಾಗ ಗುಲಾಬಿ ಬಣ್ಣದ ಟಾಪ್, ಬಿಳಿ ಬಣ್ಣದ ಪ್ಯಾಂಟ್ ಹಾಗೂ ವೇಲ್ ಧರಿಸಿದ್ದರು.

ಅಶ್ವತ್‌ನ ಚಹರೆ:
4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾನೆ. ಮನೆಯಿಂದ ಹೊರಡುವಾಗ ಬಿಳಿ ಶರ್ಟ್ ಹಾಗೂ ಕಪ್ಪು ಪ್ಯಾಂಟ್ ಧರಿಸಿದ್ದ.

ಅಶ್ವಿನ್‌ನ ಚಹರೆ:
3 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾನೆ. ಮನೆಯಿಂದ ತೆರಳುವಾಗ ಕಪ್ಪು ಬಣ್ಣದ ಶರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದ.

ಈ ತಾಯಿ ಮತ್ತು ಮಕ್ಕಳ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ದೊರೆತಲ್ಲಿ ಜಿಲ್ಲಾ ಪೊಲೀಸ್ ಕಚೇರಿ, ಶಿವಮೊಗ್ಗ (08182-261413), ಡಿಎಸ್ಪಿ ಶಿಕಾರಿಪುರ ಉಪವಿಭಾಗ (08187-222443 / 9480803323) ಅಥವಾ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ (08187-222443 / 9480803366) ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

About The Author