ಕಂಬವೇರಿ ರಿಪೇರಿ ಮಾಡುತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಸಾವು- ಇನ್ನಿಬ್ಬರು ಆಸ್ಪತ್ರೆಗೆ ದಾಖಲು
ಶಿವಮೊಗ್ಗ : ರಿಪೇರಿ ಕಾರ್ಯದ ಸಂದರ್ಭ ವಿದ್ಯುತ್ ಶಾಕ್ಗೆ ಒಳಗಾಗಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾರೆ. ವಿದ್ಯುತ್ ಕಂಬದ ಮೇಲೆಯೆ ಸಿಲುಕಿದ್ದ ಅವರನ್ನು ಕೆಳಗಿಳಿಸಿ ತಕ್ಷಣದ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು.
ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾದ ಮೊದಲ ಅಡ್ಡರಸ್ತೆಯಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ನಲ್ಲೂರಿನ ಕಿರಣ್ ಅವರಿಗೆ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಲೈನ್ ಮ್ಯಾನ್ ಸುನಿಲ್ ಎಂಬುವವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ರಿಪೇರಿ ಕಾರ್ಯಕ್ಕಾಗಿ ಕಿರಣ್ ವಿದ್ಯುತ್ ಕಂಬದ ಮೇಲೆ ಹತ್ತಿದ್ದರು. ಈ ವೇಳೆ ವಿದ್ಯುತ್ ಶಾಕ್ ತಗುಲಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜೋರು ಶಬ್ದವಾಗಿದ್ದರಿಂದ ಸಮೀಪದ ಕೈಗಾರಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರು ಸ್ಥಳಕ್ಕೆ ದೌಡಾಯಿಸಿದ್ದರು.
ವಿದ್ಯುತ್ ಲೈನ್ ಚೇಂಜ್ ವೇಳೆ ಈ ದುರ್ಘಟನೆ ಸಂಭವಿಸಿತಾ? ಅಥವಾ ಜನರೇಟರ್ಗಳ ವಿದ್ಯುತ್ ರಿವರ್ಸ್ ಆಗಿ ಘಟನೆ ಸಂಭವಿಸಿತಾ ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ಅಧಿಕಾರಿಗಳು ಪೊಲೀಸ್ ಇಲಾಖೆ ಸಿಬ್ಬಂದಿ ಭೇಟಿಕೊಟ್ಟಿದ್ದು ಪರಿಶೀಲನೆ ನಡೆಸ್ತಿದ್ದಾರೆ. ಇನ್ನೂ ಸಿಬ್ಬಂದಿಯೊಬ್ಬ ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪಿರುವುದು ಲೈನ್ ಮ್ಯಾನ್ಗಳಲ್ಲಿ ಆತಂಕ ಮೂಡಿಸಿದೆ..
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್