ಮಳೆಗಾಗಿ ಪ್ರಾರ್ಥಿಸಿ ವಿಘ್ನನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು
ರಿಪ್ಪನ್ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 56 ನೇ ವರ್ಷದ ಗಣಪತಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ವಿಶೇಷ ಪೂಜೆಯೊಂದಿಗೆ ಮಳೆಗಾಗಿ ಪ್ರಾರ್ಥಿಸಿದರು.
ವಿಘ್ನನಿವಾರಕನಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಾರ್ಥಿಸಿದ ಕೆಲವೇ ಗಂಟೆಯಲ್ಲಿ ರಿಪ್ಪನ್ಪೇಟೆಯಲ್ಲಿ ಮಳೆಯು ಅರ್ಧಗಂಟೆಗಳ ಕಾಲ ಮಳೆ ಸುರಿದು ಭಕ್ತ ಸಮೂಹವನ್ನು ಮತ್ತು ರೈತನಾಗರೀಕರಲ್ಲಿ ಮಂದಹಾಸ ಮೂಡುವಂತಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಕರ್, ಗ್ರಾಮ ಪಂಚಾಯ್ತಿ ಆಧ್ಯಕ್ಷೆ ಧನಲಕ್ಷಿ,ಉಪಾಧ್ಯಕ್ಷ ಸುದೀಂದ್ರಪೂಜಾರಿ,ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸೇವಾ ಸಮಿತಿಯ ಅಧ್ಯಕ್ಷ ನಾಗರಾಜ್ ಪವಾರ್,ಕಾರ್ಯದರ್ಶಿ ಲಕ್ಷಣ ಬಳ್ಳಾರಿ, ಎಂ.ಬಿ.ಮಂಜುನಾಥ್,ಕಗ್ಗಲಿ ಲಿಂಗಪ್ಪ, ರವೀಂದ್ರಕೆರೆಹಳ್ಳಿ, ಹೆಚ್.ಎನ್.ಉಮೇಶ್,ಬೆಳಕೋಡು ಹಾಲಸ್ವಾಮಿಗೌಡರು,ಆಶೀಫ್ ಭಾಷಾ, ರಮೇಶ್ಪ್ಯಾನ್ಸಿ, ಬಿ.ಎಸ್.ಎನ್.ಎಲ್.ಶ್ರೀಧರ, ಡಿ.ಈ.ರವಿಭೂಷಣ,ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ,ವೀರಭದ್ರಪ್ಪಗೌಡಕಲ್ಲೂರು,ರವೀಂದ್ರ ಕೆರೆಹಳ್ಳಿ, ಉಮಾಕರ್,ನಾಗರಾಜ ಕೆದಲುಗುಡ್ಡೆ,ಶ್ರೀನಿವಾಸ ಅಚಾರ್,ವೇದಾವತಿ,ದೇವರಾಜ್ ಪವಾರ್,ಗಣಪತಿಗವಟೂರು,ಆರ್.ರಾಘವೇಂದ್ರ,ಸಣ್ಣಕ್ಕಿ ಮಂಜು ಜಿ.ಡಿ.ಮಲ್ಲಿಕಾರ್ಜುನ,ಇನ್ನಿತರರು ಹಾಜರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್