ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ.
ಆಲ್ಕೋಳ ಸಮೀಪ ಇರುವ ವಿಶಾಲ್ ಮಾರ್ಟ್ ಬಳಿಯಲ್ಲಿ ಎಲ್ಐಸಿ ಆಫೀಸ್ ಹಿಂಭಾಗದಲ್ಲಿ ಎರಡು ಗುಂಪುಗಳು ಪರಸ್ಪರ ಮಾರಾಮಾರಿಯಾಗಿದೆ. ಘಟನೆಯಲ್ಲಿ ಐದು ಮಂದಿಗೆ ಚಾಕುವಿಗೆ ಇರಿಯಲಾಗಿದೆ ಒಬ್ಬರ ಸೀರಿಯಸ್ ಇದ್ದಾರೆ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದೆ.
ಈ ಭಾಗದಲ್ಲಿರುವ ಪವನ್ ಮತ್ತು ಕಿರಣ್ ಎಂಬಿಬ್ಬರು ಸ್ನೇಹಿತರಾಗಿದ್ದು, ಇವರ ನಡುವೆ ಕಳೆದ 2 ವರ್ಷಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಬಿನ್ನಾಭಿಪ್ರಾಯಗಳಿದ್ದವು. ಅಲ್ಲದೆ ಇದೇ ಕಾರಣಕ್ಕೆ ಕಿರಿಕ್ ಆಗುತ್ತಿತ್ತು. ಈ ಮಧ್ಯೆ ನಿನ್ನೆ ರಾತ್ರಿ ನೇತಾಜಿ ಸರ್ಕಲ್ನಲ್ಲಿ ಇದೇ ವಿಚಾರಕ್ಕೆ ಕಿರಿಕ್ ಆಗಿದೆ.
ನೇತಾಜಿ ಸರ್ಕಲ್ನಲ್ಲಿ ನಡೆದ ಜಗಳದ ಬೆನ್ನಲ್ಲಿಯೇ ಪವನ್ ಆ್ಯಂಡ್ ಟೀಂ ವಿಶಾಲ್ ಮಾರ್ಟ್ ಸಮೀಪವಿದ್ದ ಕಿರಣ್ ಆ್ಯಂಡ್ ಗ್ಯಾಂಗ್ ಮೇಲೆ ಅಟ್ಯಾಕ್ ಮಾಡಿದೆ. ಈ ವೇಳೆ ಕಿರಣ್ ಗ್ಯಾಂಗ್ನ ಐವರಿಗೆ ಗಾಯಗಳಾಗಿದೆ. ಐವರಿಗೆ ಇರಿತವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಅಪಾಯವಿಲ್ಲವೆಂದು ವೈದ್ಯರು ಹೇಳಿದ್ದಾರೆ.
ಇನ್ನೂ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪವನ್ ಹಾಗೂ ಆತನ ಗ್ಯಾಂಗ್ನಲ್ಲಿದ್ದು ದಾಳಿ ಮಾಡಿದ ಆರೋಪಿಗಳಿಗಾಗಿ ಹುಡುಕಾಟ ನಡೆಸ್ತಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್