ಮರಕ್ಕೆ ಡಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್; ತಪ್ಪಿದ ಭಾರಿ ಅನಾಹುತ, ಹಲವರಿಗೆ ಗಾಯ
A KSRTC bus travelling from Davanagere to Shivamogga crashed into a roadside tree near Holehatti, Holalur. Around 7-8 passengers sustained minor injuries, while a major tragedy was averted.
ಶಿವಮೊಗ್ಗ, ಜು. 9: ಶಿವಮೊಗ್ಗ ತಾಲೂಕಿನ ಹೊಳಲೂರು ಸಮೀಪದ ಹೊಳೆಹಟ್ಟಿ ಬಳಿ ಕೆಎಸ್ಆರ್ಟಿಸಿ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಗೆ ತೀವ್ರ ಹಾನಿಯಾಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ ಘಟನೆ ನಡೆದಿದೆ.
ದಾವಣಗೆರೆಯಿಂದ ಶಿವಮೊಗ್ಗದತ್ತ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಅಪಘಾತದ ತೀವ್ರತೆಗೆ ಬಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ನಲ್ಲಿದ್ದ ಸುಮಾರು 7ರಿಂದ 8 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣವೇ ನೆರವಿಗೆ ಧಾವಿಸಿ ಗಾಯಾಳುಗಳ ರಕ್ಷಣೆಗೆ ಸಹಕರಿಸಿದರು.
ಪ್ರಾಥಮಿಕ ಮಾಹಿತಿಯ ಪ್ರಕಾರ, ರಸ್ತೆ ಬದಿಯಲ್ಲಿ ನಿಂತಿದ್ದ ಓಮ್ನಿ ವಾಹನ ಏಕಾಏಕಿ ಬಲಭಾಗಕ್ಕೆ ಚಲಿಸಿದೆ. ಇದೇ ವೇಳೆ ಎದುರಿನಿಂದ ಸಿಮೆಂಟ್ ತುಂಬಿದ ಬೊಲೆರೋ ವಾಹನ ಬಂದ ಹಿನ್ನೆಲೆಯಲ್ಲಿ ಅಪಘಾತ ತಪ್ಪಿಸಲು ಬಸ್ ಚಾಲಕ ಎಡಭಾಗಕ್ಕೆ ವಾಹನ ತಿರುಗಿಸಿದ್ದಾರೆ. ಈ ವೇಳೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ಬಳಿಕ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಬಳಿಕ ಪರಿಸ್ಥಿತಿ ಸಹಜಗೊಂಡಿತು. ಘಟನೆ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್