ಹೊಟ್ಟೆ ನೋವಿನಿಂದ ಬೇಸತ್ತು ನೇಣು ಬಿಗಿದುಕೊಂಡು ಯುವಕ ಸಾವು
22-year-old outsourcing employee of Shivamogga Central Library, Bhuvan Singh, allegedly died by at his residence near Sigehatti. Doddapete Police have registered a case and are investigating.
ಶಿವಮೊಗ್ಗ: ನಗರದ ಸಿಗೇಹಟ್ಟಿ ಸಮೀಪದ ಕೆರೆದುರ್ಗಮ್ಮನ ಕೇರಿಯಲ್ಲಿ 22 ವರ್ಷದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತ ಯುವಕನನ್ನು ಭುವನ್ ಸಿಂಗ್ (22) ಎಂದು ಗುರುತಿಸಲಾಗಿದೆ. ಅವರು ಶಿವಮೊಗ್ಗ ನಗರದ ಸೆಂಟ್ರಲ್ ಲೈಬ್ರರಿಯಲ್ಲಿ ಹೊರಗುತ್ತಿಗೆ (ಔಟ್‌ಸೋರ್ಸಿಂಗ್) ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ಭುವನ್ ಸಿಂಗ್ ಕಳೆದ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಆರೋಗ್ಯ ಸಮಸ್ಯೆಯಿಂದ ಮಾನಸಿಕವಾಗಿ ನೊಂದಿದ್ದ ಅವರು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…
ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು – ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…
ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…