Headlines

NEET ವಿವಾದದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

Screenshot 2026 07 25 16 16 53 765 com.picsart.studio edit

NEET ವಿವಾದದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

Union Education Minister Dharmendra Pradhan resigns amid the NEET-UG controversy, opposition protests, and public pressure. He shares an emotional statement explaining his decision and highlights education reforms

ನವದೆಹಲಿ, ಜುಲೈ 25: NEET-UG ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳು, ಸಿಜೆಪಿ (Cockroach Janata Party) ಪ್ರತಿಭಟನೆ ಹಾಗೂ ಪ್ರತಿಪಕ್ಷಗಳ ತೀವ್ರ ಒತ್ತಡದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಕುರಿತು ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಅಧಿಕೃತ ಎಕ್ಸ್ (X) ಖಾತೆಯಲ್ಲಿ ಸುದೀರ್ಘ ಪತ್ರವನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

“ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ನಾನು ವಿದ್ಯಾರ್ಥಿ, ಶಿಕ್ಷಕ ಹಾಗೂ ಶಿಕ್ಷಣ ಸುಧಾರಣೆಗೆ ಸಮರ್ಪಿತನಾಗಿದ್ದೇನೆ. ಬಲಿಷ್ಠ ಶಿಕ್ಷಣ ವ್ಯವಸ್ಥೆಯೇ ಬಲಿಷ್ಠ ರಾಷ್ಟ್ರದ ಅಡಿಪಾಯ ಎಂಬ ನಂಬಿಕೆ ನನ್ನದು. ದೇಶದ ಯುವಕರ ಆಶಯಗಳನ್ನು ಗೌರವಿಸುತ್ತೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ರಾಷ್ಟ್ರ ಸೇವೆ ಮಾಡುವ ಅವಕಾಶ ದೊರೆತಿದ್ದಕ್ಕೆ ಕೃತಜ್ಞನಾಗಿದ್ದೇನೆ,” ಎಂದು ಅವರು ತಿಳಿಸಿದ್ದಾರೆ.

ಅದೇ ವೇಳೆ, 2026ರ ಮೇ 3ರಂದು ನಡೆದ NEET-UG ಪರೀಕ್ಷೆಯಲ್ಲಿ ಅನಿಯಮಿತತೆಗಳು ಕಂಡುಬಂದ ಹಿನ್ನೆಲೆ, ಕೇಂದ್ರ ಸರ್ಕಾರ ತಕ್ಷಣವೇ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಬಳಿಕ ಪರೀಕ್ಷೆಯನ್ನು ರದ್ದುಪಡಿಸಿ ಮರು ಪರೀಕ್ಷೆ ನಡೆಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಮುಂದಿನ ವರ್ಷಗಳಿಂದ NEET ಪರೀಕ್ಷೆಯನ್ನು CBT (Computer Based Test) ಮಾದರಿಯಲ್ಲಿ ನಡೆಸಲು ಸರ್ಕಾರ ನಿರ್ಧರಿಸಿರುವುದಾಗಿ ಅವರು ಉಲ್ಲೇಖಿಸಿದ್ದಾರೆ.

20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮರು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿತ್ತು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು, ಜಿಲ್ಲಾ ಆಡಳಿತ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ 2026ರ ಜೂನ್ 21ರಂದು ಮರು ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಶಿಕ್ಷಣ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿದೆ.