Headlines

ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆಗೆ ಅವಕಾಶ: ವಾಹನ ಮಾಲೀಕನಿಗೆ ₹25,000 ದಂಡ

Screenshot 2026 07 28 20 38 40 094 com.picsart.studio edit

ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆಗೆ ಅವಕಾಶ: ವಾಹನ ಮಾಲೀಕನಿಗೆ ₹25,000 ದಂಡ

Shivamogga court imposed a ₹25,000 fine on a bike owner for allowing a minor to ride a KTM Duke motorcycle in violation of the Motor Vehicles Act.

ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕನಿಗೆ ನ್ಯಾಯಾಲಯ ₹25,000 ದಂಡ ವಿಧಿಸಿ ಆದೇಶಿಸಿದೆ.

ನಗರದ ಸೋಮಿನಕೊಪ್ಪ ರಸ್ತೆಯಲ್ಲಿ ವಿನೋಬನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಕೆಟಿಎಂ ಡ್ಯೂಕ್ ಬೈಕ್‌ನಲ್ಲಿ ಅಪ್ರಾಪ್ತ ಬಾಲಕನೊಬ್ಬ ವಿರುದ್ಧ ದಿಕ್ಕಿನಲ್ಲಿ ಅತಿವೇಗವಾಗಿ ಸಂಚರಿಸುತ್ತಿದ್ದುದನ್ನು ಪೊಲೀಸರು ಗಮನಿಸಿ ತಡೆದರು.

ಪರಿಶೀಲನೆ ವೇಳೆ ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿ ಅಪ್ರಾಪ್ತ ವಯಸ್ಕನಾಗಿರುವುದು ದೃಢಪಟ್ಟಿದೆ. ಇದರಿಂದ ವಾಹನದ ಮಾಲೀಕನ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ನೋಟಿಸ್ ಜಾರಿ ಮಾಡಲಾಯಿತು.

ಬಳಿಕ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಿರುವುದು ಕಾನೂನು ಉಲ್ಲಂಘನೆಯಾಗಿರುವುದರಿಂದ ವಾಹನದ ಮಾಲೀಕನಿಗೆ ₹25,000 ದಂಡ ವಿಧಿಸಿ ಆದೇಶಿಸಿದೆ.

ಪೊಲೀಸರು ಪೋಷಕರು ಹಾಗೂ ವಾಹನ ಮಾಲೀಕರು ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಬಾರದು ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.