ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯ ಚಿಕಿತ್ಸೆಗೆ ವೈಯಕ್ತಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ
MLA Beluru Gopalakrishna extends financial assistance to the family of a PUC student seriously injured after a tree fell on her during heavy rain near Ripponpet. She is currently undergoing treatment at Wenlock Hospital, Mangaluru.
ರಿಪ್ಪನ್ಪೇಟೆ: ಭಾರಿ ಗಾಳಿ-ಮಳೆಯ ವೇಳೆ ಮರ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯ ಚಿಕಿತ್ಸೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ್ದಾರೆ.
ರಿಪ್ಪನ್ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಶೇಖರಪ್ಪ ಅವರ ಪುತ್ರಿ ನೀಲಾವತಿ ಗರ್ತಿಕೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಜುಲೈ 24ರಂದು ಸಂಜೆ ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಮನೆಗೆ ಮರಳುತ್ತಿದ್ದ ವೇಳೆ ಭಾರಿ ಗಾಳಿ-ಮಳೆಯ ಕಾರಣ ಮರ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಕುಟುಂಬದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವುದನ್ನು ಮನಗಂಡ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ.
ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಶಾಸಕರು ಬೆಂಗಳೂರಿನಲ್ಲಿ ಇರುವುದರಿಂದ, ಅವರ ಪರವಾಗಿ ಪಕ್ಷದ ಮುಖಂಡರು ವಿದ್ಯಾರ್ಥಿನಿಯ ತಂದೆ ಶೇಖರಪ್ಪ ಅವರಿಗೆ ಆರ್ಥಿಕ ನೆರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಮಧುಸೂಧನ್, ಆಸೀಫ್ ಭಾಷಾ, ನಿರೂಪ್ ಕುಮಾರ್, ನೇಮಣ್ಣ ಬಂಡಿ, ಶ್ರೀಧರ್ ಹಾಗೂ ನವೀನ್ ಉಪಸ್ಥಿತರಿದ್ದರು.
About The Author
ನಮಸ್ಕಾರ, ನಾನು ರಫಿ ರಿಪ್ಪನ್ಪೇಟೆ.
’ಪೋಸ್ಟ್ಮ್ಯಾನ್ ನ್ಯೂಸ್’ ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. “ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು” ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್ಮ್ಯಾನ್ ನ್ಯೂಸ್.
ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, ‘ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ’. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್ಮ್ಯಾನ್ ನ್ಯೂಸ್.”
ಇಲ್ಲಿ ‘ಸುದ್ದಿ’ ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: “ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ.”
ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ.
’ಪೋಸ್ಟ್ಮ್ಯಾನ್ ನ್ಯೂಸ್’ ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ ‘ಸೇತುವೆ’ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ.
ನಮ್ಮ ಅಂತಿಮ ಗುರಿ ಒಂದೇ — “ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು.”
ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ.
ಸ್ನೇಹಪೂರ್ವಕವಾಗಿ,
ರಫಿ ರಿಪ್ಪನ್ಪೇಟೆ
ಸಂಪಾದಕರು, ಪೋಸ್ಟ್ಮ್ಯಾನ್ ನ್ಯೂಸ್
🌐 [www.postmannewskannada.com]