ಅಪ್ರಾಪ್ತನಿಂದ ಬೈಕ್ ಚಾಲನೆ; ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್
ಶಿವಮೊಗ್ಗ (Shivamogga) ಅಪ್ರಾಪ್ತ ಪುತ್ರನಿಗೆ ಮೋಟಾರ್ ಬೈಕ್(bike) ಓಡಿಸಲು ಅವಕಾಶ ನೀಡಿದ ತಂದೆಗೆ ನಗರದ ನ್ಯಾಯಾಲಯ ₹25 ಸಾವಿರ ದಂಡ(penalty) ವಿಧಿಸಿದ ಘಟನೆ ನಡೆದಿದೆ.
17 ವರ್ಷದ ಬಾಲಕನ ತಂದೆ ಓಂಪ್ರಕಾಶ್ ಅವರಿಗೆ ಜೆಎಂಎಫ್‌ಸಿ ನ್ಯಾಯಾಲಯದ 4ನೇ ಎಸಿಜೆ ನ್ಯಾಯಾಧೀಶರು ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
2023ರ ಆ.12ರಂದು ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪಶ್ಚಿಮ ಠಾಣೆ ಪಿಎಸ್‌ಐ ತಿರುಮಲೇಶ್ ವಾಹನಗಳ ತಪಾಸಣೆ ವೇಳೆ ಅಪ್ರಾಪ್ತ(minor) ಬೈಕ್ ಚಲಾಯಿಸುತ್ತಿದ್ದ. ಈ ವೇಳೆ ಅಪ್ರಾಪ್ತನೊಬ್ಬ ಬೈಕ್ ಚಾಲನೆ ಮಾಡಿಕೊಂಡು ಬರುತ್ತಿದ್ದ.ಬೈಕ್ ತಡೆದು ಪರಿಶೀಲಿಸಿದಾಗ ಚಾಲನಾ ಪರವಾನಗಿ ಇಲ್ಲದೆ ಬೈಕ್ ಓಡಿಸಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ. ಇನ್ನಷ್ಟು ತನಿಖೆ ಮಾಡಿದಾಗ ಈತ ಅಪ್ರಾಪ್ತ ಎಂದು ಗೊತ್ತಾಯಿತು. ಅಪ್ರಾಪ್ತನಿಗೆ ಬೈಕ್ ಓಡಿಸಲು ಅವಕಾಶ ನೀಡಿದ ಆತನ ತಂದೆ ವಿರುದ್ಧ ಪಶ್ಚಿಮ ಸಂಚಾರ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರು.
ಕಾನೂನಿನ ಪ್ರಕಾರ ಅಪ್ರಾಪ್ತರಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಅವಕಾಶ ನೀಡಿರುವು ತಪ್ಪು. ಹೀಗಾಗಿ ವಾಹನ ಮಾಲೀಕರೂ ಆದ ಅಪ್ರಾಪ್ತನ ತಂದೆ ಕ್ಲಾರ್ಕ್ ಪೇಟೆಯ ಓಂ ಪ್ರಕಾಶ್ ಗೆ ದಂಡ ವಿಧಿಸಿದ್ದಾರೆ.
ಪಾಲಕರು ತಮ್ಮ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ತಮ್ಮ ವಾಹನ (ಬೈಕ್‌ಗಳನ್ನು) ಚಾಲನೆಗಾಗಿ ನೀಡಿದರೆ ಅಂತಹ ಬಾಲಕರ ತಂದೆ-ತಾಯಿಗೆ 25 ಸಾವಿರ ರು. ದಂಡ ಹಾಗೂ ತಪ್ಪಿದಲ್ಲಿ 3 ವರ್ಷ ಜೈಲು ಶಿಕ್ಷೆಯಾಗುತ್ತದೆ.
ಪೋಷಕರು ಈ ಬಗಗೆ ತಿಳಿದು ಅಪ್ರಾಪ್ತರ ಕೈಗೆ ಬೈಕ್ ಚಾಲನೆ ಅವಕಾಶ ನೀಡದಂತೆ ಎಚ್ಚರ ವಹಿಸಬೇಕು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್