w
Headlines
Home » ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

Screenshot 2026 08 12 16 49 21 108 com.picsart.studio edit

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

A container lorry lost control and collided with a roadside tree near Ulluru Kere on NH-69 between Shivamogga and Sagara. The driver sustained minor injuries.

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ಮರಕ್ಕೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ಶಿವಮೊಗ್ಗ–ಸಾಗರ ರಾಷ್ಟ್ರೀಯ ಹೆದ್ದಾರಿ-69ರ ಉಳ್ಳೂರು ಕೆರೆ ಸಮೀಪ ನಡೆದಿದೆ.

ಸಾಗರ ಕಡೆಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಂಟೇನರ್ ಲಾರಿ ಉಳ್ಳೂರು ಕೆರೆ ಬಳಿ ಬಂದಾಗ ರಸ್ತೆ ಬದಿಗೆ ವಾಲಿಕೊಂಡಿದ್ದ ಮರ ಎದುರಾಗಿದೆ. ಮರವನ್ನು ತಪ್ಪಿಸಲು ಚಾಲಕ ಯತ್ನಿಸಿದ ವೇಳೆ ಲಾರಿಯ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಕಂಟೇನರ್ ಲಾರಿಗೆ ಹಾನಿಯಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.