w
Headlines
Home » ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

Screenshot 2026 08 14 16 11 13 284 com.picsart.studio edit

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

Karnataka government reportedly orders withdrawal of the one-year ban on gutka and tobacco/nicotine-based pan masala products just two days after the ban came into effect, amid concerns over farmers and the arecanut market.

ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್‌ ಅಂಶ ಹೊಂದಿರುವ ಪಾನ್‌ ಮಸಾಲಾ ಉತ್ಪನ್ನಗಳ ಮೇಲೆ ಹೇರಲಾಗಿದ್ದ ಒಂದು ವರ್ಷದ ನಿಷೇಧವನ್ನು ಹಿಂಪಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಕೇವಲ ಎರಡು ದಿನಗಳ ಹಿಂದಷ್ಟೇ ಆಹಾರ ಸುರಕ್ಷತಾ ಆಯುಕ್ತರು ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು/ನಿಕೋಟಿನ್‌ ಒಳಗೊಂಡ ಪಾನ್‌ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶ ಹೊರಡಿಸಿದ್ದರು.

ಆದರೆ, ಈ ಆದೇಶವನ್ನು ತಮ್ಮ ಗಮನಕ್ಕೆ ತಾರದೆ ಹೊರಡಿಸಲಾಗಿದೆ. ಇದರಿಂದ ಅಡಕೆ ಸೇರಿದಂತೆ ಸಂಬಂಧಿತ ಬೆಳೆಗಾರರು ಹಾಗೂ ರೈತರಿಗೆ ಆರ್ಥಿಕ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ್ದು, ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಇದಕ್ಕೂ ಮುನ್ನ ಗುರುವಾರ ಬಿಜೆಪಿ ಮತ್ತು ಕಾಂಗ್ರೆಸ್‌ ಶಾಸಕರ ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ನಿಷೇಧ ಆದೇಶವನ್ನು ಹಿಂಪಡೆಯುವಂತೆ ಮನವಿ ಮಾಡಿತ್ತು. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಹಾಗೂ ಕಾಂಗ್ರೆಸ್‌ ಶಾಸಕ ಡಿ.ಜಿ. ಶಾಂತನೇಗೌಡ ನೇತೃತ್ವದ ನಿಯೋಗವು ಸರ್ಕಾರದ ಕ್ರಮದಿಂದ ರೈತರು ಆತಂಕಕ್ಕೊಳಗಾಗಿದ್ದಾರೆ ಎಂದು ತಿಳಿಸಿತ್ತು.

ನಿಷೇಧದಿಂದ ಅಡಕೆ ಸೇರಿದಂತೆ ಸಂಬಂಧಿತ ಕೃಷಿ ಉತ್ಪನ್ನಗಳ ಮಾರುಕಟ್ಟೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಅಡಕೆ ಬೆಳೆಗಾರರ ಹಿತ ಕಾಪಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಮನವಿ ಮಾಡಿತ್ತು.

ಇದೀಗ ಮುಖ್ಯಮಂತ್ರಿ ಸೂಚನೆಯ ಬೆನ್ನಲ್ಲೇ ನಿಷೇಧ ಆದೇಶ ಹಿಂಪಡೆಯುವ ಪ್ರಕ್ರಿಯೆ ಆರಂಭವಾಗಿದ್ದು, ಸರ್ಕಾರದ ಮುಂದಿನ ಅಧಿಕೃತ ಆದೇಶದತ್ತ ಗಮನ ನೆಟ್ಟಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.