w
Headlines
Home » ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

Screenshot 2026 08 15 15 42 10 885 com.openai.chatgpt edit

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

Two interstate thieves from Andhra Pradesh were arrested in Bhadravati for allegedly posing as police officers and stealing gold jewellery from a lone woman. Police recovered 40 grams of gold worth around ₹4.35 lakh.

ಭದ್ರಾವತಿ: ತಮ್ಮನ್ನು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಒಂಟಿ ಮಹಿಳೆಯನ್ನು ವಂಚಿಸಿ ಬಂಗಾರದ ಸರ ದೋಚಿದ್ದ ಆರೋಪದಡಿ ಆಂಧ್ರಪ್ರದೇಶ ಮೂಲದ ಇಬ್ಬರು ಅಂತರರಾಜ್ಯ ಕಳ್ಳರನ್ನು ಪೇಪರ್ ಟೌನ್ ಪೊಲೀಸ್ ಠಾಣೆಯ ತನಿಖಾ ತಂಡ ಬಂಧಿಸಿದೆ.

2025ರ ನವೆಂಬರ್ 17ರಂದು ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ತಿಮ್ಲಾಪುರದಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅವರನ್ನು ಮಾರ್ಗಮಧ್ಯೆ ತಡೆದ ಅಪರಿಚಿತ ಆರೋಪಿಗಳು, ತಾವು ಪೊಲೀಸ್ ಅಧಿಕಾರಿಗಳೆಂದು ಸುಳ್ಳು ಪರಿಚಯ ಮಾಡಿಕೊಂಡಿದ್ದಾರೆ. ಬಳಿಕ ಮಹಿಳೆಯ ಬಳಿಯಿದ್ದ ಬಂಗಾರದ ಸರವನ್ನು ಮೋಸದಿಂದ ಪಡೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದರು.

ಈ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ಹಾಗೂ ಪೇಪರ್ ಟೌನ್ ಠಾಣೆಯ ಪಿಎಸ್‌ಐ ನೇತೃತ್ವದ ಪೊಲೀಸ್ ತಂಡ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತರನ್ನು ಆಂಧ್ರಪ್ರದೇಶ ಮೂಲದ ಅಂತರರಾಜ್ಯ ಕಳ್ಳರಾದ ಸೈಯದ್ ಅಬ್ಬಾಸ್ ಅಲಿ ಅಲಿಯಾಸ್ ಕೊಡಿ ಅಲಿಯಾಸ್ ಅಬು ಹಾಗೂ ಹುಸೇನ್ ಭಾಷಾ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಪ್ರಸ್ತುತ ಮಾರುಕಟ್ಟೆ ಮೌಲ್ಯ ಸುಮಾರು ₹4.35 ಲಕ್ಷ ಇರುವ 40 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಪ್ರಕರಣದ ತನಿಖೆ ಮುಂದುವರಿದಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.