13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ
Bhadravati New Town Police have arrested a bike theft accused who had been absconding for 13 years in connection with a 2010 theft case.
ಶಿವಮೊಗ್ಗ: ಕಳೆದ 13 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳನನ್ನು ಭದ್ರಾವತಿ ನ್ಯೂ ಟೌನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. 2010ರಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣದಲ್ಲಿ ಈತ ಭಾಗಿಯಾಗಿದ್ದ ಎನ್ನಲಾಗಿದ್ದು, ಪ್ರಕರಣದ ವಿಚಾರಣೆಗೆ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಈತನ ವಿರುದ್ಧ ಭದ್ರಾವತಿಯ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ವಾರಂಟ್ ಆಧರಿಸಿ ಭದ್ರಾವತಿ ನ್ಯೂ ಟೌನ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಮಂಜುನಾಥ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್