ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ
55-year-old Bengaluru-based civil contractor Anil B. Ramdas has gone missing from Thirthahalli. Police seek public help to trace him.
ಶಿವಮೊಗ್ಗ: ಬೆಂಗಳೂರಿನ ಕೊಡಿಗೆಹಳ್ಳಿಯ ವೆಲ್ ಪುಲಾ ಆಸ್ ಡೆಲ್ ಅಪಾರ್ಟ್ಮೆಂಟ್ ನಿವಾಸಿ, 55 ವರ್ಷದ ಸಿವಿಲ್ ಕಂಟ್ರಾಕ್ಟರ್ ಅನಿಲ್ ಬಿ. ರಾಮ್ದಾಸ್ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದಾರೆ.
ಆಗಸ್ಟ್ 14ರಂದು ತೀರ್ಥಹಳ್ಳಿಯ ಮಯೂರ ಹೋಟೆಲ್ ಲಾಡ್ಜ್ನಲ್ಲಿ ತಂಗಿದ್ದ ಅನಿಲ್ ಬಿ. ರಾಮ್ದಾಸ್ ಅವರು, ಆಗಸ್ಟ್ 15ರಂದು ಬೆಳಗಿನ ಜಾವ ಸುಮಾರು 5.30ಕ್ಕೆ ಲಾಡ್ಜ್ನಿಂದ ಹೊರಗೆ ತೆರಳಿದ್ದಾರೆ. ಬಳಿಕ ಅವರು ಮನೆಗೆ ಮರಳದೇ, ಇದುವರೆಗೆ ಯಾವುದೇ ಸುಳಿವು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಾಪತ್ತೆಯಾಗಿರುವ ಅನಿಲ್ ಬಿ. ರಾಮ್ದಾಸ್ ಅವರು ಸುಮಾರು 5.4 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ ಹಾಗೂ ಸಾಧಾರಣ ಮೈಕಟ್ಟು ಹೊಂದಿದ್ದಾರೆ. ನಾಪತ್ತೆಯಾದ ವೇಳೆ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ನೀಲಿ ಬಣ್ಣದ ಶರ್ಟ್ ಧರಿಸಿದ್ದರು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅನಿಲ್ ಬಿ. ರಾಮ್ದಾಸ್ ಅವರ ಕುರಿತು ಯಾವುದೇ ಮಾಹಿತಿ ಅಥವಾ ಸುಳಿವು ದೊರೆತಲ್ಲಿ ತಕ್ಷಣವೇ ತೀರ್ಥಹಳ್ಳಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್