ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

College student threatened and robbed of a 15-gram gold chain on Puradalu Road in Shivamogga. Tunganagar police have registered a case and launched an investigation.

ಶಿವಮೊಗ್ಗ: ನಗರದ ಪುರದಾಳು ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಬೆದರಿಕೆ ಹಾಕಿ, ಆಕೆ ಧರಿಸಿದ್ದ ಸುಮಾರು 15 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಅಪರಿಚಿತ ವ್ಯಕ್ತಿಯೊಬ್ಬ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ.



ಕಾಲೇಜು ವಿದ್ಯಾರ್ಥಿನಿಯೊಬ್ಬರು ಸ್ನೇಹಿತೆಯರೊಂದಿಗೆ ಪುರದಾಳು ಡ್ಯಾಂಗೆ ತೆರಳುತ್ತಿದ್ದರು. ವಿದ್ಯಾರ್ಥಿನಿ ಕಾರಿನಲ್ಲಿ ತೆರಳುತ್ತಿದ್ದರೆ, ಆಕೆಯ ಸ್ನೇಹಿತೆಯರು ಸ್ಕೂಟಿಯಲ್ಲಿ ಹಿಂದಿನಿಂದ ಬರುತ್ತಿದ್ದರು ಎನ್ನಲಾಗಿದೆ.



ಸ್ನೇಹಿತೆಯರು ಹಿಂದೆ ಉಳಿದಿದ್ದರಿಂದ ಅವರಿಗಾಗಿ ಕಾಯಲು ವಿದ್ಯಾರ್ಥಿನಿ ಪುರದಾಳು ರಸ್ತೆಯ ಬದಿಯಲ್ಲಿ ಕಾರನ್ನು ನಿಲ್ಲಿಸಿಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಕೋಲಿನಿಂದ ಕಾರಿನ ಪಕ್ಕದ ಗಾಜನ್ನು ಒಡೆದಿದ್ದಾನೆ ಎನ್ನಲಾಗಿದೆ.



ಬಳಿಕ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ವ್ಯಕ್ತಿ, ಆಕೆ ಧರಿಸಿದ್ದ 15 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.



ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About The Author