Headlines

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ

A 16-year-old minor girl was allegedly sexually assaulted in Ripponpete and found pregnant. Police have registered a POCSO case against the accused and sent him to judicial custody.

ರಿಪ್ಪನ್‌ಪೇಟೆ: ಕೂಲಿ ಕೆಲಸಕ್ಕೆಂದು ಬಂದಿದ್ದ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಯುವಕನ ವಿರುದ್ಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದಕ್ಕೆ ಅಪ್ರಾಪ್ತ ಬಾಲಕಿ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಸುಮಾರು ಒಂದು ವರ್ಷದ ಹಿಂದೆ ಶಾಲೆ ತೊರೆದು ತಾಯಿಯೊಂದಿಗೆ ಕೂಲಿ ಕೆಲಸಕ್ಕೆ ಬಂದಿದ್ದಳು. ಈ ಸಂದರ್ಭದಲ್ಲಿ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯ ಗ್ರಾಮವೊಂದರ ನಿವಾಸಿ ಎಂದು ತಿಳಿದುಬಂದಿರುವ ಆರೋಪಿ ನಾಗರಾಜ್ ಬಾಲಕಿಯ ಪರಿಚಯ ಬೆಳೆಸಿಕೊಂಡಿದ್ದ ಎನ್ನಲಾಗಿದೆ.

ಮೇ 11, 2026ರಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಕೆಲಸದ ನೆಪದಲ್ಲಿ ಬಾಲಕಿಯನ್ನು ತೋಟವೊಂದಕ್ಕೆ ಒಂಟಿಯಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಆಕೆಯನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು. ಈ ವೇಳೆ ಬಾಲಕಿ ಸುಮಾರು ಎರಡೂವರೆ ತಿಂಗಳ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ.

ನಂತರ ಮಕ್ಕಳ ಕಲ್ಯಾಣ ಸಮಿತಿಯ ಆಪ್ತ ಸಮಾಲೋಚನೆ ವೇಳೆ ಬಾಲಕಿಯು ತನ್ನ ಮೇಲೆ ಆರೋಪಿಯಿಂದ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ರಿಪ್ಪನ್‌ಪೇಟೆ ಪೊಲೀಸರು ಆರೋಪಿ ನಾಗರಾಜ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಸೂಚನೆ :

ಪೋಕ್ಸೋ ಪ್ರಕರಣಗಳಿಗೆ ಸಂಬಂಧಿಸಿದ ಸುದ್ದಿಗಳನ್ನು ಪ್ರಕಟಿಸುವ ಸಂದರ್ಭದಲ್ಲಿ ಸಂತ್ರಸ್ತ ಬಾಲಕಿಯ ಹೆಸರು, ಫೋಟೋ, ಗುರುತು ಪತ್ತೆಹಚ್ಚಲು ಸಾಧ್ಯವಾಗುವ ಯಾವುದೇ ವಿವರಗಳನ್ನು ಹಾಗೂ ಆರೋಪಿಯ ನಿಖರ ವಿಳಾಸವನ್ನು ಪ್ರಕಟಿಸುವುದಿಲ್ಲ.

ಸಂತ್ರಸ್ತ ಬಾಲಕಿಯ ಗೌಪ್ಯತೆ ಮತ್ತು ಹಿತಾಸಕ್ತಿಯನ್ನು ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದ್ದು, ಸಂಬಂಧಿತ ಕಾನೂನು ನಿಯಮಗಳು ಹಾಗೂ ಪತ್ರಿಕಾ ನೀತಿ ಸಂಹಿತೆಯನ್ನು ಪಾಲಿಸಿ ಸುದ್ದಿಯನ್ನು ಪ್ರಕಟಿಸಲಾಗುತ್ತದೆ.

— POSTMAN NEWS

About The Author