ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ
MLA Belur Gopalakrishna and RM Manjunath Gowda flagged off a protest padayatra in Hosanagara opposing the Kasturirangan report notification, with hundreds participating.
ಹೊಸನಗರ: ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು.
ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆಯ ಅಧ್ಯಕ್ಷ ಆರ್.ಎಂ. ಮಂಜುನಾಥ್ಗೌಡ ಅವರು ಪಾದಯಾತ್ರೆಗೆ ಚಾಲನೆ ನೀಡಿದರು.
ಕಾರಣಗಿರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ, ಎತ್ತಿನಗಾಡಿಯ ಮೇಲೆ ನಿಂತು ಕಸ್ತೂರಿರಂಗನ್ ವರದಿ ವಿರೋಧಿ ಪೋಸ್ಟರ್ ಪ್ರದರ್ಶಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ಪಾದಯಾತ್ರೆಯಲ್ಲಿ ರೈತರು, ಕೃಷಿ ಕಾರ್ಮಿಕರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದಾರೆ. ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯಿಂದ ಮಲೆನಾಡಿನ ರೈತರು ಹಾಗೂ ಗ್ರಾಮೀಣ ಜನರ ಬದುಕಿನ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ.
ಹೊಸನಗರದವರೆಗೂ ಪಾದಯಾತ್ರೆ ಮುಂದುವರೆಯಲಿದ್ದು ನಂತರ ಬಹಿರಂಗ ಸಭೆ ಏರ್ಪಡಿಸಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್