ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು
Thieves broke into an arecanut godown in Holalur, Shivamogga, and allegedly stole 4.80 quintals of dry arecanut worth around ₹2.50 lakh. Police have registered a case.
ಶಿವಮೊಗ್ಗ: ಹೊಳಲೂರು ಗ್ರಾಮದ ಅಡಕೆ ಗೋಡಾನ್ಗೆ ರಾತ್ರಿ ವೇಳೆ ನುಗ್ಗಿದ ಕಳ್ಳರು ಜಾಲರಿ ಮುರಿದು ಸುಮಾರು ₹2.50 ಲಕ್ಷ ಮೌಲ್ಯದ ಒಣ ಅಡಕೆಯನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ.
ಅಡಕೆ ವ್ಯಾಪಾರಿ ಅಕ್ರಮುಲ್ಲಾಖಾನ್ ಅವರಿಗೆ ಸೇರಿದ ಗೋಡಾನ್ನಲ್ಲಿ ಈ ಕಳವು ನಡೆದಿದೆ. ಗೋಡಾನ್ನಲ್ಲಿ ಒಟ್ಟು 80 ಮೂಟೆಗಳ ಅಡಕೆಯನ್ನು ಸಂಗ್ರಹಿಸಿಡಲಾಗಿತ್ತು ಎನ್ನಲಾಗಿದೆ.
ಕಳವು ನಡೆದಿರುವುದು ಬೆಳಕಿಗೆ ಬಂದ ಬಳಿಕ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕಳ್ಳರು ರಾತ್ರಿ ವೇಳೆ ಗೋಡಾನ್ನ ಜಾಲರಿಯನ್ನು ಮುರಿದು ಒಳನುಗ್ಗಿರುವುದು ಕಂಡುಬಂದಿದೆ.
ಗೋಡಾನ್ನಲ್ಲಿದ್ದ 6 ಮೂಟೆಗಳಿಂದ ಸುಮಾರು 4 ಕ್ವಿಂಟಾಲ್ 80 ಕೆಜಿ ಒಣ ಅಡಕೆಯನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಕಳವಾದ ಅಡಕೆಯ ಮೌಲ್ಯವನ್ನು ಸುಮಾರು ₹2.50 ಲಕ್ಷ ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್