ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

Ripponpete Government Model Boys School is preparing to celebrate its historic centenary. A preliminary meeting of alumni and well-wishers will be held on September 3 at 2 PM.

ರಿಪ್ಪನ್‌ಪೇಟೆ: ಪಟ್ಟಣದ ಪ್ರತಿಷ್ಠಿತ ಹಾಗೂ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿರುವ ಸರ್ಕಾರಿ ಮಾದರಿ ಬಾಲಕರ ಪಾಠ ಶಾಲೆಯು ಇದೀಗ ಅಮೃತ ಮಹೋತ್ಸವ ಹಾಗೂ ಶತಮಾನೋತ್ಸವದ ಐತಿಹಾಸಿಕ ಸಂಭ್ರಮದಲ್ಲಿದೆ. ಈ ಮಹತ್ವದ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 3ರ ಗುರುವಾರ ಮಧ್ಯಾಹ್ನ 2 ಗಂಟೆಗೆ ಶಾಲಾ ಆವರಣದಲ್ಲಿ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.

​ನೂರು ವರ್ಷಗಳನ್ನು ಪೂರೈಸಿರುವ ಈ ಅಕ್ಷರ ದೇಗುಲದ ಋಣ ತೀರಿಸುವ ಬಹುದೊಡ್ಡ ಜವಾಬ್ದಾರಿ ಇದೀಗ ಹಳೆಯ ವಿದ್ಯಾರ್ಥಿಗಳ ಮೇಲಿದೆ. ಕಾರ್ಯಕ್ರಮದ ರೂಪುರೇಷೆ, ಅಗತ್ಯ ಸಿದ್ಧತೆಗಳು, ಸಂಘಟನಾ ಜವಾಬ್ದಾರಿ ಹಾಗೂ ಸಲಹೆ-ಸಹಕಾರಗಳ ಕುರಿತು ಈ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಗುವುದು.

ಒಂದು ಶತಮಾನದ ಇತಿಹಾಸವಿರುವ ಶಾಲೆಯ ಈ ಕಾರ್ಯಕ್ರಮ ಕೇವಲ ಆಚರಣೆಯಾಗದೆ, ಶಾಲೆಯ ಅಭಿವೃದ್ಧಿಗೆ ಪೂರಕವಾಗುವಂತೆ ಆಯೋಜಿಸುವ ಬಗ್ಗೆಯೂ ಸಮಾಲೋಚನೆ ನಡೆಯಲಿದೆ.

​ಶಾಲೆಯಲ್ಲಿ ವ್ಯಾಸಂಗ ಮಾಡಿ ನಾಡಿನೆಲ್ಲೆಡೆ ವಿವಿಧ ಕ್ಷೇತ್ರಗಳಲ್ಲಿ ನೆಲೆಸಿರುವ ಎಲ್ಲಾ ಹಳೆಯ ವಿದ್ಯಾರ್ಥಿಗಳು ತಮ್ಮ ಕೆಲಸದ ನಡುವೆಯೂ ಸಮಯ ಮಾಡಿಕೊಂಡು ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಈ ಐತಿಹಾಸಿಕ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸುವಂತೆ ಶಾಲೆಯ ಮುಖ್ಯೋಪಾಧ್ಯಾಯರು ಪತ್ರಿಕಾ ಪ್ರಕಟಣೆಯಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ.

About The Author