ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

Retired Vice Chancellor Prof. M.K. Naik, 63, died after accidentally falling into an open well at his native village in Kumta taluk, Uttara Kannada.

ಶಿವಮೊಗ್ಗ: ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ (63) ಅವರು ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನಲ್ಲಿ ನಡೆದಿದೆ.

ಶಿವಮೊಗ್ಗದಲ್ಲಿ ವಾಸವಾಗಿದ್ದ ಪ್ರೊ. ಎಂ.ಕೆ. ನಾಯ್ಕ್ ಅವರು ಮೂಲತಃ ಕುಮಟಾ ತಾಲ್ಲೂಕಿನ ವನ್ನಳ್ಳಿ ಗ್ರಾಮದವರು. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ತಮ್ಮ ಊರಿಗೆ ತೆರಳಿದ್ದ ಅವರು, ಪೂಜೆಗೆ ನೀರು ತರಲು ತೋಟದ ಮನೆ ಸಮೀಪದ ಬಾವಿಯ ಬಳಿ ತೆರಳಿದ್ದರು ಎನ್ನಲಾಗಿದೆ.

ಈ ವೇಳೆ ಆಕಸ್ಮಿಕವಾಗಿ ಆಯತಪ್ಪಿ ತೆರೆದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಅವರ ಪುತ್ರ ಚಿನ್ಮಯ್ ನಾಯ್ಕ್ ಅವರು ಕುಮಟಾ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಕುಮಟಾ ಪೊಲೀಸ್ ಠಾಣೆಯ ತಿಳಿಸಿದ್ದಾರೆ.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

About The Author