ಕಾಂಗ್ರೆಸ್ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲು
ಸಾಮಾಜಿಕ ಜಾಲತಾಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ಆರೋಪಿಸಿ ದೂರು ನೀಡಿದ್ದರು.
ಈ ದೂರಿನ ಮೇರೆಗೆ ಸೂಲಿಬೆಲೆ ವಿರುದ್ಧ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೆ ತಿಂಗಳ 23 ರಂದು ಚಂದ್ರಯಾನ -3 ಯಶಸ್ವಿಗೆ ಪೂಜೆ ಮಾಡಿಸಿ ಫೋಟೋ ಹಾಕಿ ಎಂದು ಪೋಸ್ಟ್ ಹಾಕಿದ್ದ ಸೂಲಿಬೆಲೆ ಪೋಸ್ಟ್ಗೆ ಸೌಗಂಧಿಕ ರಘುನಾಥ್ ತಮ್ಮ ಅಧಿಕೃತ ಖಾತೆಯಿಂದ ಕಾಮೆಂಟ್ ಮಾಡಿ, ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ, ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು ಎಂದು ಕಾಮೆಂಟ್ ಮಾಡಿದ್ದರು. ಈ ಕಾಮೆಂಟ್ಗೆ ಸೂಲಿಬೆಲೆಯವರು ಅವಹೇಳನಕಾರಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ದೂರು ನೀಡಿದ್ದರು.
ಈ ಕುರಿತು ಮಾತನಾಡಿರುವ ಸೌಗಂಧಿಕಾ ರಘುನಾಥ್ ದೇಶ, ಭಾಷೆ, ಧರ್ಮದ ಹೆಸರಲ್ಲಿ ಧರ್ಮದ ಹೆಸರಲ್ಲಿ ಬಾಷಣ ಮಾಡುವ ವ್ಯಕ್ತಿ ಈಗ ಹೆಣ್ಣುಮಕ್ಕಳ ನಿಂದನೆಗೆ ಇಳಿದಿದ್ದಾರೆ. ಯಾವ ಹೆಣ್ಣಿಗೂ ಕೂಡ ಈತರದ ಮಾತುಗಳನ್ನ ಆಡಬಾರದು, ಅವರ ಮನೆಯಲ್ಲಿರುವ ತಾಯಿ ಕೂಡ ಹೆಣ್ಣು ಎನ್ನುವುದನ್ನು ಮರೆಯಬಾರದು. ಹಾಗಾಗಿ ಅಂತವರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಸೌಗಂಧಿಕ ರಘುನಾಥ್ ಘಟನೆಯ ಬಗ್ಗೆ ಹೇಳಿದ್ದೇನು? :
ದೇವರಿಗೆ ಪೂಜೆ ಮಾಡುವುದಕ್ಕೆ ನನ್ನ ಅಭ್ಯಂತರವೇನೂ ಇಲ್ಲ. ಆದರೆ ಸೂಲಿಬೆಲೆ ಅವರು ತೋರ್ಪಡಿಕೆಯ ಫೊಟೋ ಹಾಕಿ ಎಂದಿದ್ದಕ್ಕೆ, ನಾನು ಸಭ್ಯವಾಗಿ ಕಾಮೆಂಟ್ ಮಾಡಿದ್ದೆ. ಈ ಕಾಮೆಂಟ್ ಹಾಕಿದ ಬಳಿಕ ಸಾಕಷ್ಟು ಫೇಕ್ ಅಕೌಂಟ್‌ಗಳಿಂದ ನನ್ನ ತೇಜೋವಧೆ ನಡೆದಿದೆ. ನಾನು ಯಾವುದಕ್ಕೂ ಸೊಪ್ಪು ಹಾಕೋದಿಲ್ಲ. ಸ್ವತಃ ಸೂಲಿಬೆಲೆ ಅವರು ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದಾರೆ. ಹೆಣ್ಣು ನಿಂದನೆಯ ಅಸಭ್ಯ ಕಾಮೆಂಟ್ಗೆ ನಾನೂ ಪ್ರತಿಕ್ರಿಯಿಸಿ, ಸೂಲಿಬೆಲೆ ದೊಡ್ಡ ಭಾಷಣಕಾರನಾಗಿ, ಮಾತೃ ಪ್ರೀತಿಯಿಂದಲೂ ಬೆಳೆದು ಈ ರೀತಿ ಕಾಮೆಂಟ್ ಹಾಕಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದೆ.
ಸುಳ್ಳು ಭಾಷಣ ಮಾಡಿ, ಜನರನ್ನು ಧರ್ಮದ ಹೆಸರಲ್ಲಿ ದಿಕ್ಕು ತಪ್ಪಿಸುವುದನ್ನು ಬಿಡಬೇಕು. ಹೆಣ್ಣುಮಕ್ಕಳಿಗೆ ಮರ್ಯಾದೆ ಕೊಡಬೇಕು. ಅವರು ಆ ಕಾಮೆಂಟ್ ಡಿಲೀಟ್ ಮಾಡಿದ ಮೇಲೆ ಫೇಕ್ ಅಕೌಂಟ್ ಮೂಲಕ ಸ್ಕ್ರೀನ್ ಶಾಟ್ ಬಳಸಿ ತೇಜೋವಧೆ ಮಾಡಿಸಿದ್ದಾರೆ. ತಪ್ಪು ಮಾಡಿದ್ದನ್ನು ಒಪ್ಪಿಕೊಳ್ಳುವ ದೊಡ್ಡಗುಣ ಸೂಲಿಬೆಲೆಗೆ ಇಲ್ಲ. ಇಂತಹ ಸ್ತ್ರೀ ನಿಂದಕ ಸೂಲಿಬೆಲೆಯ ಮಾತುಗಳನ್ನು ಜನ ನಂಬುವುದು ನಾಚಿಕೆಗೇಡಿನ ವಿಷಯ ಎಂದು ದೂರು ನೀಡಿದ ಬಳಿಕ ವಾಗ್ದಾಳಿ ನಡೆಸಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್