ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ
ರಿಪ್ಪನ್‌ಪೇಟೆ : ಆಗಸ್ಟ್ 28ರ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ರಿಪ್ಪನ್‌ಪೇಟೆ ಘಟಕ ಉದ್ಘಾಟನೆ ಹಾಗೂ ಉಚಿತ ಸಂಚಾರಿ ಚಿಕಿತ್ಸಾಲಯದ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ ಎಂದು ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹಾಗೂ ಹೊಸನಗರ ಗ್ರಾಮಾಂತರ ಅಧ್ಯಕ್ಷ ಮಹಮ್ಮದ್ ಹುಸೇನ್ ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಪಟ್ಟಣದ ಗ್ರಾಮ ಪಂಚಾಯಿತಿ ಕುವೆಂಪು ಸಭಾ ಭವನದಲ್ಲಿ ಪತ್ರೀಕಾಗೋಷ್ಟಿಯನ್ನುದೇಶಿಸಿ ಮಾತನಾಡಿದ ಅವರು ಕಟ್ಟಡ ಕಾರ್ಮಿಕರ ಸಂಘದ ನೂತನ ಘಟಕ ಹಾಗೂ ಉಚಿತ ಸಂಚಾರಿ ಚಿಕಿತ್ಸಾಲಯವನ್ನು ಸಂಸದ ಬಿ ವೈ ರಾಘವೇಂದ್ರ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಸೋಮವಾರ ಬೆಳಿಗ್ಗೆ 9ಕ್ಕೆ ಸಿದ್ಧಿವಿನಾಯಕ ದೇವಸ್ಥಾನದಿಂದ ಜಿಎಸ್‌ಬಿ ಕಲ್ಯಾಣ ಮಂದಿರದವರೆಗೆ ಕಾರ್ಮಿಕರು ರಸ್ತೆ ಜಾಥಾದಲ್ಲಿ ತೆರಳಿ ಅಲ್ಲಿ ಸಮಾವೇಶ ಗೊಳ್ಳಲಿದೆ ಎಂದರು.
ಕರ್ನಾಟಕ ಸ್ಟೇಟ್ ಕನ್ ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ (ರಿ )(kscwcu) ಅಡಿಯಲ್ಲಿ ಈ ಸಂಘವು ನಿಯೋಜನೆಗೊಂಡಿದೆ ಎಂದ ಅವರು, ಈ ಸಂದರ್ಭದಲ್ಲಿ ಕಾರ್ಮಿಕ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ, ಗುರುತು ಚೀಟಿ ವಿತರಣೆ, ಹಿರಿಯ ಮೇಸ್ತ್ರಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಎಸ್‌ಬಿ ಕಲ್ಯಾಣ ಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಹೆಚ್ ಹಾಲಪ್ಪ ಕಟ್ಟಡ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಸುಬ್ರಮಣಿ, ಗ್ರಾಮಾಂತರ ಅಧ್ಯಕ್ಷ ಸಂಜಯ್ ಕುಮಾರ್, ಕಾರ್ಮಿಕ ಅಧಿಕಾರಿ ಸುಮಾ ಇನ್ನು ಮುಂತಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕೆರೆಹಳ್ಳಿ ಹೋಬಳಿ ಹಾಗೂ ಹುಂಚ ಹೋಬಳಿಯ ಎಲ್ಲಾ ಕಟ್ಟಡ ಕಾರ್ಮಿಕರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.
ಈ ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ಸತೀಶ್ ಆರ್, ಕಾರ್ಯದರ್ಶಿ ಪರಮೇಶ್, ಖಜಾಂಚಿ ರಾಘವೇಂದ್ರ,ಉಪಾಧ್ಯಕ್ಷ ಶೌಕತ್,ಪದಾಧಿಕಾರಿಗಳಾದ
ವೆಂಕಟೇಶ್, ಪ್ರಭಾಕರ್ ಆಚಾರ್, ಕೆ ಎಸ್ ವಿಜಯ್ ಕುಮಾರ್, ಇನ್ನಿತರರು ಉಪಸ್ಥಿತರಿದ್ದರು.