ಮುಖ್ಯ ಶಿಕ್ಷಕರ ವರ್ಗಾವಣೆಗೆ ಆಗ್ರಹಿಸಿ ತಮ್ಮಡಿಕೊಪ್ಪ ಗ್ರಾಮಸ್ಥರ ಪ್ರತಿಭಟನೆ
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ಆಗ್ರಹಿಸಿ ಪೋಷಕರು ಹಾಗೂ ಗ್ರಾಮಸ್ಥರು ದಿಡೀರ್ ಪ್ರತಿಭಟನೆ ನಡೆಸುತಿದ್ದಾರೆ.
ಕಳೆದ ಹಲವಾರು ತಿಂಗಳುಗಳಿಂದ ಮುಖ್ಯ ಶಿಕ್ಷಕರಾದ ಗಂಗನಾಯ್ಕ್ ಅನಧಿಕೃತವಾಗಿ ಸತತ ಗೈರು ಹಾಜರಾಗುತಿದ್ದು ಪೋಷಕರ ಹಾಗೂ ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿತ್ತು.
ಈ ಹಿನ್ನಲೆಯಲ್ಲಿ ಶಾಲಾಭಿವೃದ್ದಿ ಸಮಿತಿ,ಪೋಷಕರು ಹಾಗೂ ಸಾರ್ವಜನಿಕರು ಇಂದು ದಿಡೀರ್ ಪ್ರತಿಭಟನೆ ನಡೆಸಿ ಮುಖ್ಯ ಶಿಕ್ಷಕರ ಕಛೇರಿಯ ಕೊಠಡಿಗೆ ಬೀಗ ಜಡಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾಕಾರರು ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಬರುವಂತೆ ಪಟ್ಟು ಹಿಡಿದು ಕುಳಿತಿದ್ದಾರೆ.ಸ್ಥಳಕ್ಕೆ ಪಿಎಸ್‌ಐ ಪ್ರವೀಣ್ ಎಸ್ ಪಿ ಭೇಟಿ ನೀಡಿದ್ದಾರೆ.