POSTMANNEWS

ನೈಜ ಸುದ್ದಿ ನೇರ ಬಿತ್ತರ..

ಭಾರಿ ಮಳೆಗೆ ಮನೆ ಮೇಲೆ ಉರುಳಿದ ಬೃಹತ್ ಮರ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ | GKB

ಭಾರಿ ಮಳೆಗೆ ಮನೆ ಮೇಲೆ ಉರುಳಿದ ಬೃಹತ್ ಮರ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ | GKB

ಸಾಗರ : ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಆವಿನಹಳ್ಳಿ ಸಮೀಪದ ಚಿಪ್ಪಳ್ಳಿಕೊಪ್ಪದಲ್ಲಿ ಎರಡು ಮನೆಗಳ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿತ್ತು.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.


ಅವಿನಹಳ್ಳಿ ಹೋಬಳಿಯ ಕೋಳೂರು ಗ್ರಾಮ ಪಂಚಾಯಿತಿ ಚಿಪ್ಪಳಿಕೊಪ್ಪದ ಸುಬ್ಬ ನಾಯಕ್ ಮತ್ತು ಪುರುಷೋತ್ತಮ್ ರವರ ಮನೆಯ ಮೇಲೆ ಬೃಹತ್ ಆಕಾರದ ಮಾವಿನ ಮರ ಬಿದ್ದು ಭಾರಿ ಹಾನಿಯುಂಟಾಗಿತ್ತು.


ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಮನೆ ಹಾನಿಗೊಳಗಾದ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿ ಆರ್ಥಿಕ ಸಹಾಯದ ಭರವಸೆ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *