POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಲಗೇಜ್ ಆಟೋ ಡಿಕ್ಕಿ: ಗಂಭೀರವಾಗಿ ಗಾಯಗೊಂಡಿದ್ದ 8 ವರ್ಷದ ಬಾಲಕ ಚಿಕಿತ್ಸೆ ಫಲಿಸದೇ ಸಾವು

Screenshot 2026 10 02 13 56 24 053 com.openai.chatgpt edit

ಲಗೇಜ್ ಆಟೋ ಡಿಕ್ಕಿ: ಗಂಭೀರವಾಗಿ ಗಾಯಗೊಂಡಿದ್ದ 8 ವರ್ಷದ ಬಾಲಕ ಸಾವು | 8-year-old boy Tanmay died after being hit by a Tata luggage auto near Dasakoppa village on the Anandapur-Shikaripura road in Sagara taluk. Police have registered a case and are investigating the accident.

ಸಾಗರ: ರಸ್ತೆ ಬದಿಯಲ್ಲಿ ನಿಂತಿದ್ದ 8 ವರ್ಷದ ಬಾಲಕನಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದಾರುಣ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪ ನಡೆದಿದೆ.

ಸೆಪ್ಟೆಂಬರ್ 27ರಂದು ಸಂಜೆ ಆನಂದಪುರ–ಶಿಕಾರಿಪುರ ರಸ್ತೆಯ ದಾಸಕೊಪ್ಪ ಗ್ರಾಮದ ಪಾಂಡುರಂಗ ದೇವಾಲಯದ ಬಳಿ ಈ ಅಪಘಾತ ಸಂಭವಿಸಿತ್ತು.

ಗೌತಮಪುರ ಕಡೆಯಿಂದ ಆನಂದಪುರದತ್ತ ಟಾಟಾ ಲಗೇಜ್ ಆಟೋವನ್ನು ಸಂತೋಷ್ ಕೊಲ್ಲಪ್ಪ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದರು. ಈ ವೇಳೆ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ರಸ್ತೆ ಬದಿಯಲ್ಲಿದ್ದ ಅಂಗಡಿ ಬಳಿ ನಿಂತಿದ್ದ ತನ್ಮಯ್ (8), ತಂದೆ ಪ್ರಶಾಂತ್ ಕೃಷ್ಣಮೂರ್ತಿ ಎಂಬ ಬಾಲಕನಿಗೆ ಆಟೋದ ಗ್ರಿಲ್ ತಾಗಿ ಗಂಭೀರ ಗಾಯಗಳಾಗಿತ್ತು.

ಅಪಘಾತದಲ್ಲಿ ಬಾಲಕನ ಬಲ ಹಣೆಯ ಭಾಗ ಹಾಗೂ ಬಲಕೈಗೆ ಗಂಭೀರ ಗಾಯಗಳಾಗಿದ್ದು, ಹಣೆಯ ಭಾಗದಲ್ಲಿ ತೆರೆದ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣ ಬಾಲಕನನ್ನು ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಾಲಕನ ಚಿಕಿತ್ಸೆಗಾಗಿ ಆನಂದಪುರ ಪೊಲೀಸರು ಹಾಗೂ ಸಾರ್ವಜನಿಕರು ತಮ್ಮಿಂದಾದಷ್ಟು ಆರ್ಥಿಕ ನೆರವು ನೀಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.

ಈ ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಘಟನೆ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.