ನೇಣು ಬಿಗಿದುಕೊಂಡು ವೃದ್ಧೆ ಸಾವು | An elderly woman identified as Ratnamma (68) died after reportedly hanging herself at her residence in Doona village near Ripponpete. Police have registered a case and investigation is underway.
ರಿಪ್ಪನ್ಪೇಟೆ: ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ದೂನ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ದೂನ ಗ್ರಾಮದ ನಿವಾಸಿ ರತ್ನಮ್ಮ (68) ಎಂದು ಗುರುತಿಸಲಾಗಿದೆ.
ಮಾಹಿತಿ ಪ್ರಕಾರ, ರತ್ನಮ್ಮ ಅವರು ಗುರುವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಷಯ ತಿಳಿದು ಕುಟುಂಬಸ್ಥರು ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.ಮೃತ್ಯುವಿಗೆ ಅಲ್ಪಕಾಲದ ಅನಾರೋಗ್ಯ ಕಾರಣವಾಗಿರಬಹುದು ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದ ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ಘಟನೆ ಕುರಿತು ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
































