ಶಿವಮೊಗ್ಗ ಅಣ್ಣನಗರದ ಚಾನೆಲ್ ಬಳಿ ಯುವಕನ ಶವ ಪತ್ತೆ – ಕೊಲೆ ಶಂಕೆ | A 35-year-old man identified as Husman Ali was found dead near the channel at Annanagar in Shivamogga. Police suspect foul play and have begun an investigation
ಶಿವಮೊಗ್ಗ: ನಗರದ ಅಣ್ಣನಗರದ ಚಾನೆಲ್ ಬಳಿ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೃತ ಯುವಕನನ್ನು ಹುಸ್ಮಾನ್ ಅಲಿ (35) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಅಶೋಕನಗರದ ಗಲ್ಲಿಯ ನಿವಾಸಿಯಾಗಿದ್ದ ಹುಸ್ಮಾನ್ ಅಲಿ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.
ಹೊರಗಡೆ ಕೆಲವರೊಂದಿಗೆ ಮದ್ಯ ಸೇವಿಸುತ್ತಿದ್ದ ವೇಳೆ ಗಲಾಟೆ ನಡೆದಿದ್ದು, ಇದೇ ಸಂದರ್ಭದಲ್ಲಿ ಹುಸ್ಮಾನ್ ಅಲಿ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರಬಹುದು ಎಂಬ ಶಂಕೆ ಸ್ಥಳೀಯರಿಂದ ವ್ಯಕ್ತವಾಗಿದೆ. ಅಣ್ಣನಗರದ ಚಾನೆಲ್ ಬಳಿ ಈ ಘಟನೆ ನಡೆದಿರಬಹುದೆಂಬ ಅನುಮಾನವೂ ವ್ಯಕ್ತವಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಯುವಕನ ಸಾವಿನ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೊಲೆ ನಡೆದಿರುವುದು ತನಿಖೆಯಿಂದ ದೃಢಪಟ್ಟ ಬಳಿಕವೇ ಘಟನೆಯ ಸಂಪೂರ್ಣ ಹಿನ್ನೆಲೆ ಸ್ಪಷ್ಟವಾಗಲಿದೆ.
