ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ | A 48-year-old VISL AGM, Govindaraju, was found dead by suicide at VISL quarters in Bhadravati, Shivamogga. New Town Police have registered a case and launched an investigation.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ ಆಗಿ ಸೇವೆ ಸಲ್ಲಿಸುತ್ತಿದ್ದ 48 ವರ್ಷದ ಗೋವಿಂದರಾಜು ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಭದ್ರಾವತಿ ನಗರದ VISL ಕ್ವಾರ್ಟರ್ಸ್‌ನ ಕೊಠಡಿಯಲ್ಲಿ ಗೋವಿಂದರಾಜು ಅವರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ಗೋವಿಂದರಾಜು ಅವರು ತಮಿಳುನಾಡಿನ ಸೇಲಂ ಮೂಲದವರಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ VISL ಕಾರ್ಖಾನೆಯಲ್ಲಿ ಎಜಿಎಂ ಆಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನ್ಯೂ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಈ ಘಟನೆ ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
