w
Headlines
Home » ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಕೆಸುವಿನಮನೆ ರತ್ನಾಕರ್ ನಿಧನ

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಕೆಸುವಿನಮನೆ ರತ್ನಾಕರ್ ನಿಧನ

Screenshot 2026 10 07 22 07 57 095 com.miui.gallery edit

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಕೆಸುವಿನಮನೆ ರತ್ನಾಕರ್ ನಿಧನ

ಹೊಸನಗರ ತಾಲೂಕ್ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾಗಿದ್ದ ಕೆಸುವಿನಮನೆ ರತ್ನಾಕರ್ | Ripponpete Government High School Vice Principal and Hosanagara Taluk Kannada Sahitya Parishat president Kesuvinmane Ratnakar, 58, passed away after prolonged illness.

ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಹಾಗೂ ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಕೆಸುವಿನಮನೆ ರತ್ನಾಕರ್ (58) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಬುಧವಾರ ಸಂಜೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಹೊಸನಗರ ತಾಲ್ಲೂಕಿನ ನಿಲ್ಸಕಲ್ ಸಮೀಪದ ಕೆಸುವಿನಮನೆ ಗ್ರಾಮದ ಮೂಲದವರಾದ ರತ್ನಾಕರ್ ಅವರು, ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2020ರಿಂದ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಉಪ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

2024ರಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅವರು, ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಕಳೆದ ಕೆಲವು ತಿಂಗಳುಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಸಾಹಿತ್ಯ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದ ರತ್ನಾಕರ್ ಅವರು ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಸೇವೆ ಸಲ್ಲಿಸಿದ್ದ ಅವರು, ಶಿಕ್ಷಕರು, ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗ ಹಾಗೂ ಸ್ನೇಹಿತರನ್ನು ಅಗಲಿದ್ದಾರೆ.

ಕೆಸುವಿನಮನೆ ರತ್ನಾಕರ್ ಅವರ ನಿಧನಕ್ಕೆ ಪೋಸ್ಟ್‌ಮ್ಯಾನ್ ನ್ಯೂಸ್ ಬಳಗ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.