w
Headlines
Home » ಕಾರು–ಕ್ಯಾಂಟರ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ಮೂವರಿಗೆ ಗಾಯ

ಕಾರು–ಕ್ಯಾಂಟರ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ಮೂವರಿಗೆ ಗಾಯ

Screenshot 2026 10 23 18 55 25 295 com.openai.chatgpt edit

ಕಾರು–ಕ್ಯಾಂಟರ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ಮೂವರಿಗೆ ಗಾಯ |Two people died and three were injured in a head-on collision between a car and a canter near Taralaghatta Camp on the Shivamogga–Shikaripura–Hanagal State Highway.

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಕ್ಯಾಂಪ್ ಸಮೀಪ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಶಿವಮೊಗ್ಗ–ಶಿಕಾರಿಪುರ–ಹಾನಗಲ್ ರಾಜ್ಯ ಹೆದ್ದಾರಿಯ ತರಲಘಟ್ಟ ಕ್ಯಾಂಪ್ ಬಳಿ ಕಾರು ಮತ್ತು ಅಡಿಕೆ ಸಾಗಿಸುತ್ತಿದ್ದ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಶಿರಾಳಕೊಪ್ಪ ಸಮೀಪದ ಮುತ್ತಿಗೆ ಗ್ರಾಮದ ನಿವಾಸಿಗಳಾದ ಕಾರು ಚಾಲಕ ಸಿದ್ದು (34) ಹಾಗೂ ಲಲಿತಮ್ಮ (65) ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮುತ್ತಿಗೆ ಗ್ರಾಮದ ಐವರು ಕಾರಿನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ತೆರಳಿ, ಅಲ್ಲಿಂದ ತಮ್ಮ ಗ್ರಾಮಕ್ಕೆ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಅಡಿಕೆ ತುಂಬಿಕೊಂಡು ಸಾಗುತ್ತಿದ್ದ ಕ್ಯಾಂಟರ್ ಕಾರಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಉಜ್ಜಪ್ಪ (74), ಹನುಮಂತಪ್ಪ (65) ಹಾಗೂ ಜಯಮ್ಮ (55) ಗಾಯಗೊಂಡಿದ್ದು, ಅವರನ್ನು ಶಿಕಾರಿಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.