w
Headlines
Home » ರಿಪ್ಪನ್‌ಪೇಟೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ, ಶಿವಮೊಗ್ಗಕ್ಕೆ ರವಾನೆ

ರಿಪ್ಪನ್‌ಪೇಟೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ, ಶಿವಮೊಗ್ಗಕ್ಕೆ ರವಾನೆ

Screenshot 2026 10 29 11 12 39 920 com.openai.chatgpt edit

ರಿಪ್ಪನ್‌ಪೇಟೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ, ಶಿವಮೊಗ್ಗಕ್ಕೆ ರವಾನೆ | Two motorcycles collided head-on in front of Jumma Masjid on Hosanagar Road in Ripponpete. Two people sustained serious injuries and were shifted to Shivamogga for further treatment.

ರಿಪ್ಪನ್‌ಪೇಟೆ: ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಮುಂಭಾಗದಲ್ಲಿ ಇಂದು ಬೆಳಿಗ್ಗೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದಲ್ಲಿ ಗವಟೂರಿನ ನೆಹರು ಬಡಾವಣೆಯ ರಫಿ (75) ಎಂಬುವವರಿಗೆ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಅದೇ ಬಡಾವಣೆಯ ಪುರುಷೋತ್ತಮ (45) ಎಂಬುವವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಶಾಹೀದ್ (19) ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ರಿಪ್ಪನ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ.

ಈ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.