w
Headlines
Home » ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Screenshot 2026 10 30 14 12 43 098 com.openai.chatgpt edit

ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು | A 41-year-old bike rider, Chandranaik from Kuskuru village, died on the spot after a private bus collided with his motorcycle near Ganapathi Temple in Shikaripura, Shivamogga district.

ಶಿವಮೊಗ್ಗ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ನಡೆದಿದೆ.

ಮೃತರನ್ನು ಶಿಕಾರಿಪುರ ತಾಲೂಕಿನ ಕುಸ್ಕೂರು ಗ್ರಾಮದ ಚಂದ್ರನಾಯ್ಕ್ (41) ಎಂದು ಗುರುತಿಸಲಾಗಿದೆ.

ಚಂದ್ರನಾಯ್ಕ್ ಅವರು ಶಿಕಾರಿಪುರದಿಂದ ತಮ್ಮ ಸ್ವಗ್ರಾಮ ಕುಸ್ಕೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಶಿರಾಳಕೊಪ್ಪದಿಂದ ಶಿಕಾರಿಪುರದ ಕಡೆಗೆ ಬರುತ್ತಿದ್ದ ಖಾಸಗಿ ಬಸ್, ಶಿಕಾರಿಪುರ ಗಣಪತಿ ದೇವಸ್ಥಾನದ ಸಮೀಪ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ ರಸ್ತೆಗೆ ಬಿದ್ದ ಚಂದ್ರನಾಯ್ಕ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಕುರಿತು ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.