ಕೆಎಸ್ಆರ್‌ಟಿಸಿ ಬಸ್ ಪಲ್ಟಿ: ಚಾಲಕ, ನಿರ್ವಾಹಕ ಸೇರಿ 13 ಮಂದಿಗೆ ಗಾಯ! | A KSRTC bus overturned near Bapat Kalyana Mantapa on the national highway in Sagar after an axle blade broke. Thirteen people, including the driver and conductor, were injured.
ಸಾಗರ: ನವೆಂಬರ್ 01: ಆಕ್ಸೆಲ್ ಬ್ಲೇಡ್ ತುಂಡಾದ ಪರಿಣಾಮ ಕೆಎಸ್ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನವೆಂಬರ್ 01ರ ಮುಂಜಾನೆ ಸಾಗರ ಪಟ್ಟಣದ ಬಾಪಟ್ ಕಲ್ಯಾಣ ಮಂಟಪದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಸಾಗರಕ್ಕೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಬಸ್ ಚಾಲಕ, ನಿರ್ವಾಹಕ ಸೇರಿದಂತೆ 11 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಒಟ್ಟು 13 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್‌ನಲ್ಲಿದ್ದ ಉಳಿದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಕೆಎಸ್ಆರ್‌ಟಿಸಿ ಡಿಪೋದ ಪ್ರಭಾರ ವ್ಯವಸ್ಥಾಪಕ ಅರುಣ್ ಬೈಲೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆಯ ವ್ಯವಸ್ಥೆ ಕಲ್ಪಿಸಿದ್ದಾರೆ.
