w
Headlines
Home » ಹೊನ್ನೆಬೈಲು ಗ್ರಾಮದಲ್ಲಿ ನೂರಾರು ಎಕರೆ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ಆರೋಪ: ತೆರವಿಗೆ ಗ್ರಾಮಸ್ಥರ ಆಗ್ರಹ!

ಹೊನ್ನೆಬೈಲು ಗ್ರಾಮದಲ್ಲಿ ನೂರಾರು ಎಕರೆ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ಆರೋಪ: ತೆರವಿಗೆ ಗ್ರಾಮಸ್ಥರ ಆಗ್ರಹ!

IMG 20261102 WA0007

ಹೊನ್ನೆಬೈಲು ಗ್ರಾಮದಲ್ಲಿ ನೂರಾರು ಎಕರೆ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ಆರೋಪ: ತೆರವಿಗೆ ಗ್ರಾಮಸ್ಥರ ಆಗ್ರಹ! | Residents of Honneಬೈಲು village in Hosanagara taluk allege illegal encroachment of government land in survey numbers 99, 92 and 11 and urge the Tahsildar to conduct an inspection and clear encroachments as per law.

ಹೊಸನಗರ: ತಾಲೂಕಿನ ಹುಂಚಾ ಹೋಬಳಿಯ ಹೊನ್ನೆಬೈಲು ಗ್ರಾಮದ ಸರ್ವೆ ನಂಬರ್ 99, 92, 11 ಸೇರಿದಂತೆ ವಿವಿಧ ಸರ್ಕಾರಿ ಜಮೀನುಗಳಲ್ಲಿ ನೂರಾರು ಎಕರೆ ಪ್ರದೇಶವನ್ನು ಅಕ್ರಮವಾಗಿ ಬಗರ್ ಹುಕುಂ ಹೆಸರಿನಲ್ಲಿ ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಹೊನ್ನೆಬೈಲು ಗ್ರಾಮದ ಸುರೇಶ್ ಎನ್.ಜಿ. ಬಿನ್ ಗಿಡ್ಡನಾಯ್ಕ ಹಾಗೂ ಗ್ರಾಮಸ್ಥರು ಹೊಸನಗರ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದು, ಸರ್ಕಾರಿ ಜಮೀನುಗಳ ಅಕ್ರಮ ಒತ್ತುವರಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಗ್ರಾಮದ ವ್ಯಾಪ್ತಿಗೆ ಒಳಪಡುವ ಸರ್ವೆ ನಂಬರ್ 99, 92, 11 ಹಾಗೂ ಇತರೆ ಸರ್ಕಾರಿ ಸರ್ವೆ ನಂಬರ್‌ಗಳ ಜಮೀನುಗಳನ್ನು ಕೆಲವು ಪ್ರಭಾವಿ ವ್ಯಕ್ತಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಸರ್ವೆ ಕಾರ್ಯ ಕೈಗೊಳ್ಳಬೇಕು. ಸರ್ಕಾರಿ ಜಮೀನುಗಳ ಒತ್ತುವರಿ ಬಗ್ಗೆ ಸಮಗ್ರ ತನಿಖೆ ನಡೆಸಿ, ಅಕ್ರಮ ಒತ್ತುವರಿ ದೃಢಪಟ್ಟಲ್ಲಿ ಕಾನೂನು ಪ್ರಕಾರ ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ತಹಶೀಲ್ದಾರರನ್ನು ಆಗ್ರಹಿಸಿದ್ದಾರೆ.

ಸರ್ಕಾರಿ ಜಮೀನುಗಳ ಸಂರಕ್ಷಣೆ ಹಾಗೂ ಅಕ್ರಮ ಒತ್ತುವರಿ ತೆರವು ವಿಚಾರದಲ್ಲಿ ಕಂದಾಯ ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.