ಫಾರ್ಚೂನರ್ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ಮೂವರನ್ನು ಬಂಧಿಸಿದ ತೀರ್ಥಹಳ್ಳಿ ಪೊಲೀಸರು|arrested

ಶಿವಮೊಗ್ಗದಿಂದ ಫಾರ್ಚುನರ್ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ಮೂವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ತೀರ್ಥಹಳ್ಳಿ ಮೂಲದ ಯುವಕರಾದ ಯೂಸುಫ್ ಖಾನ್ , ಅತೀಫ್, ಮನೋಜ್ ಎನ್ನುವ ಮೂವರು ತೀರ್ಥಹಳ್ಳಿ ಮೂಲದ ಯುವಕರನ್ನು ವಶಕ್ಕೆ ಪಡೆಯಲಾಗಿದೆ.

ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಗಜಾನನಾ ವಾಮನ್ ಸುತಾರ್ ಅವರ ಮಾರ್ಗದರ್ಶನದಲ್ಲಿ ಮಾಲೂರು ಠಾಣೆಯ ನವೀನ್ ಮಠಪತಿ ಅವರ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿಗಳು ಸೇರಿ ಫಾರ್ಚೂನರ್ ಕಾರನ್ನು ತಡೆದು ಪರಿಶೀಲಿಸಿದಾಗ 200 ಗ್ರಾಂ ಗಾಂಜಾ ಪತ್ತೆಯಾಗಿದೆ. ಕಾರನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಖಚಿತ ಮಾಹಿತಿಯ ಮೇರೆಗೆ ಬಲೆ ಬೀಸಿದ್ದ ಪೊಲೀಸರು ಆರೋಪಿಗಳ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದ್ದು ಗಾಂಜಾ ಜಾಲ ಇನ್ನಷ್ಟು ಕಡೆ ಹಬ್ಬಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಲಾಗುತ್ತಿದೆ.

ತೀರ್ಥಹಳ್ಳಿಯಲ್ಲಿ ಗಾಂಜಾ ವಿಪರೀತ ಪ್ರಮಾಣದಲ್ಲಿ ಬಳಕೆಯಾಗುತ್ತಿದ್ದು ಪೊಲೀಸರು ವಿಶೇಷ ತನಿಖೆ ನಡೆಸಲು ಮುಂದಾಗಿದ್ದಾರೆ. ಕೋಣಂದೂರಿನಲ್ಲಿ ತೋಟವೊಂದರಲ್ಲಿ ಬೆಳೆದಿದ್ದ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ಇದೀಗ ಮಾಳೂರಿನಲ್ಲಿ ತನಿಖೆ ವೇಳೆ ಗಾಂಜಾ ಸಾಗಿಸುತ್ತಿದ್ದ ಪ್ರಕರಣ ದಾಖಲಾಗಿದೆ. ಪೊಲೀಸರ ಕೆಲಸದ ಕುರಿತು ಸಾರ್ವಜನಿಕವಾಗಿ ಪ್ರಶಂಸೆ ವ್ಯಕ್ತವಾಗುತ್ತಿದೆ.

ಡಿವೈಎಸ್‌ಪಿ ಗಜಾನನ ವಾಮನ ಸುತರ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಮಾಳೂರು ಎಸ್‌ಐ ನವೀನ್‌ ಮಠಪತಿ, ಎಎಸ್‌ಐ ಶಿವಾನಂದ, ಧರಣಯ್ಯ ಸಿಬ್ಬಂದಿಗಳಾದ ಸುರಕ್ಷಿತ್‌, ಸಂತೋಷ್‌, ವಿವೇಕ್‌, ರಾಮಣ್ಣ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗದಿಂದ ಫಾರ್ಚುನರ್ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ಮೂವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ..

Leave a Reply

Your email address will not be published. Required fields are marked *