ತೀರ್ಥಹಳ್ಳಿಯಲ್ಲಿ ಅಪರಿಚಿತ ವಾಹನ ಡಿಕ್ಕಿ: ಚಿರತೆ ಮರಿ ಸ್ಥಳದಲ್ಲೇ ಸಾವು! | A leopard cub died after being hit by an unidentified vehicle at Melige Kouribailu in Thirthahalli taluk, Shivamogga district. Forest officials inspected the spot.
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಿಗೆಯ ಕೌರಿಬೈಲು ಪ್ರದೇಶದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿಯೊಂದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಈ ಭಾಗದ ರಸ್ತೆಯಲ್ಲಿ ಚಿರತೆ ಮರಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳೀಯರ ಪ್ರಕಾರ, ಈ ಭಾಗದಲ್ಲಿ ಹಲವು ಚಿರತೆಗಳು ಸಂಚರಿಸುತ್ತಿದ್ದು, ಆಗಾಗ್ಗೆ ವನ್ಯಜೀವಿಗಳು ರಸ್ತೆಗಳಿಗೆ ಬರುತ್ತಿವೆ. ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವ ಅಗತ್ಯವಿದೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಪ್ರದೇಶದ ರಸ್ತೆಗಳಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಬೇಕು ಹಾಗೂ ವನ್ಯಜೀವಿಗಳ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
