ಶಿವಮೊಗ್ಗ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಜಿ.ಎನ್. ಸುಧೀರ್ ಅವಿರೋಧ ಆಯ್ಕೆ | G.N. Sudheer has been unanimously elected as the Vice President of Shivamogga District Cooperative Central Bank (DCC Bank) following the resignation of S.K. Mariyappa.
ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ (ಡಿಸಿಸಿ ಬ್ಯಾಂಕ್) ಉಪಾಧ್ಯಕ್ಷರಾಗಿ ಜಿ.ಎನ್. ಸುಧೀರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧಿಕಾರ ಹಂಚಿಕೆ ಸಂದರ್ಭದಲ್ಲಿ ಮಾಡಿಕೊಂಡಿದ್ದ ಒಪ್ಪಂದದಂತೆ ಈ ಹಿಂದೆ ಉಪಾಧ್ಯಕ್ಷರಾಗಿದ್ದ ಎಸ್.ಕೆ. ಮರಿಯಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದರಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ದೇಶಕರ ಸಭೆಯು ಜಿ.ಎನ್. ಸುಧೀರ್ ಅವರನ್ನು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದೆ.
ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ.ಎನ್. ಸುಧೀರ್ ಅವರು ಪ್ರಸ್ತುತ ಶಿವಮೊಗ್ಗದ ಕೊಡಚಾದ್ರಿ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ, ಈ ಹಿಂದೆ ಎರಡು ಬಾರಿ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
