ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತನಿಗೆ ಮಣೆ: ಆನಂದಪುರದ ನಿಂಗಪ್ಪ ಎಸ್. ಅವರಿಗೆ ಪಶ್ಚಿಮ ಘಟ್ಟ ಸಂರಕ್ಷಣಾ ಸಮಿತಿಯ ನಿರ್ದೇಶಕ ಸ್ಥಾನ! |Congress appoints Ningappa S. from Yedehalli, Sagar, as Director of Karnataka State Western Ghats Conservation Task Force Committee under the latest corporation and board appointments.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ತೀವ್ರ ಕುತೂಹಲ ಕೆರಳಿಸಿದ್ದ ನಿಗಮ-ಮಂಡಳಿಗಳ ನೇಮಕಾತಿ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಪಕ್ಷಕ್ಕಾಗಿ ದೀರ್ಘಕಾಲದಿಂದ ದುಡಿದ ನಿಷ್ಠಾವಂತ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ 60 ಪ್ರಮುಖ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಒಟ್ಟು 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯ ಬಳಿಕ ನೇಮಕಾತಿ ಪಟ್ಟಿ ಬಿಡುಗಡೆಯಾಗಿದೆ.
ಈ ನೇಮಕಾತಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರದ ಯಡೆಹಳ್ಳಿ ವ್ಯಾಪ್ತಿಯ ಗೇರುಬೀಸು ನಿವಾಸಿ, ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಮುಖಂಡರಾದ ನಿಂಗಪ್ಪ ಎಸ್. ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿಯ ನಿರ್ದೇಶಕರನ್ನಾಗಿ ಅವರನ್ನು ನೇಮಕ ಮಾಡಲಾಗಿದೆ.
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮದೇ ಆದ ಸಂಘಟನಾ ಶಕ್ತಿ ಹೊಂದಿರುವ ನಿಂಗಪ್ಪ ಎಸ್. ಅವರಿಗೆ ಪಕ್ಷ ಗುರುತಿಸಿ ಮಹತ್ವದ ಸ್ಥಾನಮಾನ ನೀಡಿರುವುದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.
ನಿರ್ದೇಶಕ ಸ್ಥಾನ ದೊರೆತಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ನಿಂಗಪ್ಪ ಎಸ್. ಅವರು, ಈ ಜವಾಬ್ದಾರಿ ದೊರೆಯಲು ಬೆಂಬಲವಾಗಿ ನಿಂತು ಸಹಕರಿಸಿದ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತೆ ಸಲ್ಲಿಸಿದ್ದಾರೆ.


