ಯುವತಿ ಕಾಣೆ: ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು | 20-year-old Keerthana from Biluvani village has been missing since October 23 after visiting Shiralakoppa. Police seek public assistance to trace her.
ಶಿವಮೊಗ್ಗ: ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳುವಾಣಿ ಗ್ರಾಮದ 20 ವರ್ಷದ ಕೀರ್ತನಾ ಎಂಬ ಯುವತಿ ಕಾಣೆಯಾಗಿದ್ದು, ಪತ್ತೆಗಾಗಿ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ.
ಕೀರ್ತನಾ ಅವರು ಅಕ್ಟೋಬರ್ 23ರಂದು ಮನೆಗೆ ಬೇಕಾದ ವಸ್ತುಗಳನ್ನು ತರಲು ಶಿರಾಳಕೊಪ್ಪಕ್ಕೆ ತೆರಳಿದ್ದರು. ಆದರೆ ಮನೆಗೆ ತೆರಳಿದವರು ಈವರೆಗೂ ವಾಪಸ್ಸಾಗಿಲ್ಲ ಎಂದು ತಿಳಿದುಬಂದಿದೆ.
ಕಾಣೆಯಾದ ಯುವತಿಯ ಚಹರೆ ಹೀಗಿದೆ: ಸುಮಾರು 5.5 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ ಹಾಗೂ ಕೋಲುಮುಖ ಹೊಂದಿದ್ದಾರೆ. ಮನೆಯಿಂದ ತೆರಳುವಾಗ ಕೆಂಪು ಬಣ್ಣದ ಚೂಡಿದಾರ ಧರಿಸಿದ್ದರು.
ಯುವತಿಯ ಬಗ್ಗೆ ಯಾರಿಗಾದರೂ ಮಾಹಿತಿ ಅಥವಾ ಸುಳಿವು ಲಭ್ಯವಾದಲ್ಲಿ ಶಿರಾಳಕೊಪ್ಪ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು:
8722983310
9480803367
ಯುವತಿಯ ಪತ್ತೆಗೆ ಸಹಕರಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
