ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕೊಟ್ಟಿಗೆಗೆ ಬೆಂಕಿ; ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಪರಿಶೀಲನೆ | Fire broke out at Savitha Lohith’s house in Vasave village, Hosanagara taluk, due to an electrical short circuit on Thursday night. Tahsildar Bharath Raj and local representatives visited the spot following MLA Beluru Gopalakrishna’s instructions.
ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕೊಟ್ಟಿಗೆಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿರುವ ಘಟನೆ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ವಸವೆ ಗ್ರಾಮದ ನಿವಾಸಿ ಸವಿತಾ ಲೋಹಿತ್ ಅವರಿಗೆ ಸೇರಿದ ಮನೆಯ ಪಕ್ಕದ ಕೊಟ್ಟಿಗೆಯಲ್ಲಿ ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಪರಿಣಾಮ ಕೊಟ್ಟಿಗೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸೂಚನೆಯ ಮೇರೆಗೆ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಹೊಸನಗರ ತಹಶೀಲ್ದಾರ್ ಭರತ್ ರಾಜ್, ತೀರ್ಥಹಳ್ಳಿ ಇಂಟೆಕ್ ಕಾರ್ಯದರ್ಶಿ ಕೌಶಿಕ್ ಬಂಡಾರಿ ಸೇರಿದಂತೆ ಸ್ಥಳೀಯ ಮುಖಂಡರು ಭೇಟಿ ನೀಡಿ ಸಂತ್ರಸ್ತ ಕುಟುಂಬದವರಿಂದ ಘಟನೆಯ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಧರ್ಮಪ್ಪ, ರಮೇಶ್, ಗೋಪಿನಾಥ್, ಸುದಿ, ನವೀನ್, ಅಶ್ವಥ್, ಸುಮುಖ ಸೇರಿದಂತೆ ಹಲವರು ಉಪಸ್ಥಿತರಿದ್ದರು.
