ಅಕ್ರಮ ಗೋ ಸಾಗಾಟ ಆರೋಪ – ಗೂಡ್ಸ್ ಆಟೋ ಸಹಿತ ಮೂವರು ಪೊಲೀಸರ ವಶಕ್ಕೆ | Three persons were taken into police custody along with a goods auto for allegedly transporting cattle illegally near Guddekoppa in Thirthahalli taluk.
ತೀರ್ಥಹಳ್ಳಿ: ಗೂಡ್ಸ್ ಆಟೋದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ವಾಹನ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಸಮೀಪ ನಡೆದಿದೆ.
ಗುಡ್ಡೆಕೊಪ್ಪದಿಂದ ಗೋವುಗಳನ್ನು ಗೂಡ್ಸ್ ಆಟೋದಲ್ಲಿ ತುಂಬಿಕೊಂಡು ಮಾಳೂರು ವ್ಯಾಪ್ತಿಯ ಬಿಸಿಲುಮನೆ ಪ್ರದೇಶಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ಈ ವೇಳೆ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಗಮನಿಸಿದ ಸ್ಥಳೀಯ ಗ್ರಾಮಸ್ಥರು ವಾಹನವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ವಾಹನವನ್ನು ಪರಿಶೀಲಿಸಿದಾಗ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಗೂಡ್ಸ್ ಆಟೋವನ್ನು ವಶಕ್ಕೆ ಪಡೆದಿದ್ದಾರೆ.
ಅಲ್ಲದೆ, ವಾಹನದಲ್ಲಿದ್ದ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
